alex Certify
ಕನ್ನಡ ದುನಿಯಾ       Mobile App
       

Kannada Duniya

‘ತಿಂಗಳಾಂತ್ಯಕ್ಕೆ ಬ್ಲಾಕ್ ಮನಿ ಘೋಷಿಸದಿದ್ದರೆ ಕ್ರಮ’

modi kl

ನವದೆಹಲಿ: ಕಪ್ಪುಹಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಸೆಪ್ಟಂಬರ್ 30 ರೊಳಗೆ ಕಪ್ಪು ಹಣ ಘೋಷಿಸದಿದ್ದರೆ, ಗಂಭೀರ ಪರಿಣಾಮ ಎದುರಿಸಿ ಎಂದು ಎಚ್ಚರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು, ಕಪ್ಪುಹಣ ಹೊಂದಿದವರಿಗೆ ಅಂತಿಮ ಗಡುವು ನೀಡಿದ್ದು, ಸೆಪ್ಟಂಬರ್ 30 ರೊಳಗೆ ಕಪ್ಪುಹಣದ ಬಗ್ಗೆ ಘೋಷಿಸದಿದ್ದರೆ ಗಂಭೀರ ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಪ್ಪುಹಣದ ಕುರಿತಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತನಿಖಾ ತಂಡದ ಉಸ್ತುವಾರಿಯನ್ನು ಸುಪ್ರೀಂ ಕೋರ್ಟ್ ವಹಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕಪ್ಪುಹಣ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರಲಾಗಿದೆ. ಸೆಪ್ಟಂಬರ್ 30 ರೊಳಗೆ ಕಪ್ಪುಹಣ ಘೋಷಿಸಬೇಕು. ಇಲ್ಲದಿದ್ದರೆ, ಗಂಭೀರ ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...