alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಶಾಕ್: ನಿರಂತರವಾಗಿ ಏರುತ್ತಲೇ ಇದೆ ಪೆಟ್ರೋಲ್-ಡೀಸೆಲ್ ಬೆಲೆ

ಈಗಾಗಲೇ ಗಗನಮುಖಿಯಾಗಿರುವ ಪೆಟ್ರೋಲ್-ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಏರಿಕೆಯಾಗುವ ಮೂಲಕ ಪ್ರತಿ ಲೀಟರ್ ಪೆಟ್ರೋಲ್ ಗೆ 78.68 ರೂ. ಗಳಾಗಿದ್ದರೆ ಡೀಸೆಲ್ ಬೆಲೆ ಇಂದು ಪ್ರತಿ ಲೀಟರ್ ಗೆ 70.76 ರೂ. ತಲುಪಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿಲೀಟರ್ ಗೆ 86.25 ರೂ. ಗಳಾಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರಿಗೆ 75.12 ರೂ. ಗಳಾಗಿದೆ.

ತೈಲ ಬೆಲೆ ಏರಿಕೆ ತಾತ್ಕಾಲಿಕವಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ವ್ಯತ್ಯಾಸ ವಾಗುತ್ತಿರುವ ಕಾರಣ ದೇಶಿಯ ಮಾರುಕಟ್ಟೆಯಲ್ಲಿ ಇದರ ಪರಿಣಾಮ ಬೀರುತ್ತಿದೆ. ಕೆಲ ದಿನಗಳಲ್ಲೇ ತೈಲ ದರ ಇಳಿಕೆಯಾಗಲಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಸಹ, ಪೆಟ್ರೋಲ್-ಡೀಸೆಲ್ ಬೆಲೆಯ ಸತತ ಏರಿಕೆಯ ಕಾರಣಕ್ಕೆ ಗ್ರಾಹಕರು ತತ್ತರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...