alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳೆಗಾರರಿಗೆ ಕಣ್ಣೀರು ತರಿಸಿದ ಈರುಳ್ಳಿ

ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ಬೆಳೆಗಾರರ ಕಣ್ಣಲ್ಲಿ ನೀರು ತರಿಸಿದೆ. ಕೆಜಿಗೆ ಎರಡರಿಂದ ಮೂರು ರೂ. ಗಳಿಗೆ ಈರುಳ್ಳಿ ಮಾರಾಟವಾಗಿದ್ದು, ರೈತರಿಗೆ ಸಾಗಾಣಿಕೆ ವೆಚ್ಚವೂ ಸಿಗದಂತಾಗಿದೆ.

ಅತಿ ಹೆಚ್ಚು ಪ್ರಮಾಣದಲ್ಲಿ ಬೆಳೆಯಲಾಗಿರುವ ಈರುಳ್ಳಿ, ಒಮ್ಮೆಗೆ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಲು ಕಾರಣವೆನ್ನಲಾಗಿದ್ದು, ರೈತರಿಂದ ಕನಿಷ್ಠ ಬೆಲೆಗೆ ಖರೀದಿಸುತ್ತಿರುವ ವ್ಯಾಪಾರಿಗಳು, ಮೂರರಿಂದ ಎಂಟು ರೂ.ಗಳವರೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಕೆಜಿಗೆ 40 ರೂ. ಗಳವರೆಗೆ ಮಾರಾಟವಾಗಿದ್ದ ಈರುಳ್ಳಿ, ಈಗ ಕೇವಲ ಎರಡರಿಂದ 4 ರೂ. ಗಳಿಗೆ ಮಾರಾಟವಾಗುತ್ತಿರುವುದು ಬೆಳೆಗಾರರ ಕಳವಳಕ್ಕೆ ಕಾರಣವಾಗಿದೆ. ಈರುಳ್ಳಿಗೆ ಬೆಂಬಲ ಬೆಲೆ ನೀಡಬೇಕು ಎಂಬ ಒತ್ತಾಯ ರೈತರಿಂದ ಕೇಳಿ ಬರುತ್ತಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...