alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯಮ ವ್ಯವಹಾರ ಸರಳೀಕರಣ: ಆಂಧ್ರ ಫಸ್ಟ್

minister-centr

ನವದೆಹಲಿ: ಉದ್ಯಮ ವ್ಯವಹಾರ ಸರಳೀಕರಣ ಪ್ರಕ್ರಿಯೆಗೆ ಪೂರಕವಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 9 ನೇ ಸ್ಥಾನದಿಂದ 13 ನೇ ಸ್ಥಾನಕ್ಕೆ ಕುಸಿದಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಉದ್ಯಮ ವ್ಯವಹಾರಗಳ ಸರಳೀಕರಣ ಪೂರಕವಾದ ಪಟ್ಟಿಯಲ್ಲಿ ಆಂಧ್ರಪ್ರದೇಶ ಮೊದಲನೇ ಸ್ಥಾನದಲ್ಲಿದೆ. ತೆಲಂಗಾಣ 2 ನೇ ಸ್ಥಾನದಲ್ಲಿದ್ದು, ಗುಜರಾತ್ 3 ನೇ ಸ್ಥಾನದಲ್ಲಿದೆ. ಇನ್ನುಳಿದಂತೆ ಛತ್ತೀಸ್ ಗಢ ಮತ್ತು ಮಧ್ಯಪ್ರದೇಶ ಕ್ರಮವಾಗಿ 4 ಮತ್ತು 5 ನೇ ಸ್ಥಾನದಲ್ಲಿವೆ. ಈ ಪಟ್ಟಿಯಲ್ಲಿ ಕರ್ನಾಟಕ 13 ನೇ ಸ್ಥಾನದಲ್ಲಿದೆ.

ವಿಶ್ವ ಮಟ್ಟದಲ್ಲಿ ಭಾರತ 131 ನೇ ಸ್ಥಾನದಲ್ಲಿದೆ. 2016 ನೇ ಸಾಲಿನ ಉದ್ಯಮ ವ್ಯವಹಾರ ಸರಳೀಕರಣ ಪ್ರಕ್ರಿಯೆ ವೇಗವಾಗಿ ನಡೆಯುತ್ತಿರುವ ಬಗ್ಗೆ ರಾಜ್ಯ ಮತ್ತು ದೇಶಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕ 9 ರಿಂದ 13 ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನವದೆಹಲಿಯಲ್ಲಿ ಇಂದು ಉದ್ಯಮ ವ್ಯವಹಾರಗಳ ಸರಳೀಕರಣ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...