alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯ ಪ್ರಿಯರು, ಬಾರ್ ಮಾಲೀಕರಿಗೆ ಶಾಕಿಂಗ್ ನ್ಯೂಸ್…!

ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುತ್ತೆ ಎನ್ನುವುದು ಸಾಮಾನ್ಯ ವಿಚಾರವೇ. ಬಾರ್ ಗಳ ಮಾಲೀಕರು ಈ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭರ್ಜರಿ ವಹಿವಾಟಿನ ನಿರೀಕ್ಷೆಯಲ್ಲಿದ್ದಾರೆ.

ಆದರೆ, ಚುನಾವಣಾ ಆಯೋಗ ನೀಡಿರುವ ನೋಟಿಸ್ ನಿಂದಾಗಿ ಬಾರ್ ಮಾಲೀಕರು ಕಂಗಾಲಾಗಿದ್ದಾರೆ. ನೀತಿಸಂಹಿತೆ ಉಲ್ಲಂಘನೆಯಾಗದಂತೆ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮದ್ಯದ ಹೊಳೆಗೆ ಕಡಿವಾಣ ಹಾಕಲು ಮುಂದಾಗಿದೆ.

ಕೆಲವು ಬಾರ್ ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಮದ್ಯ ಎಷ್ಟು ಪ್ರಮಾಣದಲ್ಲಿ ಮಾರಾಟವಾಗಿದೆ ಎಂಬ ಮಾಹಿತಿಯನ್ನು ಅಬಕಾರಿ ಇಲಾಖೆ ಮೂಲಕ ನೀಡುವಂತೆ ಸೂಚಿಸಲಾಗಿದೆ. ಚುನಾವಣೆ ಅವಧಿಯಲ್ಲಿ, ಈ ತಿಂಗಳಲ್ಲಿ ಮಾರಾಟವಾದ ಮದ್ಯ ಮತ್ತು ಕಳೆದ ವರ್ಷ ಇದೇ ಅವಧಿಯಲ್ಲಿ ಮಾರಾಟವಾದ ಮದ್ಯದ ವಿವರ ನೀಡಲು ತಿಳಿಸಲಾಗಿದೆ.

ನಿಯಮ ಮೀರಿ ಜಾಸ್ತಿ ಮದ್ಯ ಮಾರಾಟ ಮಾಡುವ ಬಾರ್ ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಬಾರ್ ಮಾಲೀಕರು ಕಂಗಾಲಾಗಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...