alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿಲ್ಲ ಪರವಾನಗಿ

ದೆಹಲಿ: ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಎಲೆಕ್ಟ್ರಿಕ್ ವಾಹನ ಸೇರಿದಂತೆ, ಸಿ.ಎನ್.ಜಿ., ಎಥನಾಲ್ ಸೇರಿದಂತೆ ಪರ್ಯಾಯ ಇಂಧನದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವಾಹನಗಳು ರಸ್ತೆಗೆ ಇಳಿಯಲು ಇನ್ನು ಪರವಾನಗಿ ಅವಶ್ಯವಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಈ ನೂತನ ಕಾನೂನಿಗೆ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿವೆ. ಇದರಿಂದ ಪರ್ಯಾಯ ಇಂಧನ ಬಳಸುವ ಸವಾರರಿಗೆ ಪರವಾನಗಿ ಪಡೆಯುವ ಕಿರಿಕಿರಿ ತಪ್ಪುವುದರೊಂದಿಗೆ, ಈ ರೀತಿಯ ವಾಹನಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದರೊಂದಿಗೆ ಪರಿಸರ ಸ್ನೇಹಿ ವಾಹನಗಳಿಗೆ ಈಗಾಗಲೇ ಜಿ.ಎಸ್.ಟಿ.ಯಲ್ಲಿ ಅನುಕೂಲ ಮಾಡಿಕೊಟ್ಟಿರುವುದರಿಂದ ಹೆಚ್ಚುವರಿ ಸಬ್ಸಿಡಿ ನೀಡುವ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಈ ಸಂಬಂಧ ಬಹುತೇಕ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾನೂನು ಜಾರಿಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...