alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಶಾಕಿಂಗ್ ನ್ಯೂಸ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದೆ.

ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಕಳೆದ 4 ವರ್ಷಗಳಲ್ಲಿನ ಗರಿಷ್ಠ ಮಟ್ಟವನ್ನು ತಲುಪಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆ ಬರೆದಿದೆ.

ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲು ಎಕ್ಸೈಸ್ ಸುಂಕವನ್ನು ಕಡಿಮೆ ಮಾಡಬೇಕೆಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬಂದಿದೆ.

ಪೆಟ್ರೋಲಿಯಂ ಸಚಿವಾಲಯ ಕೂಡ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿತ ಮಾಡಬೇಕೆಂದು ಮನವಿ ಮಾಡಿತ್ತಾದರೂ, ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತ ಮಾಡಲು ಕ್ರಮಕೈಗೊಂಡಿಲ್ಲ.

ಹಿಂದೆ 2 ರೂ. ಅಬಕಾರಿ ಸುಂಕ ಕಡಿತ ಮಾಡಿದ್ದ ಕೇಂದ್ರ, ವ್ಯಾಟ್ ಕಡಿತ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಕೆಲವೇ ಕೆಲವು ರಾಜ್ಯಗಳನ್ನು ಹೊರತುಪಡಿಸಿ, ಉಳಿದ ರಾಜ್ಯಗಳು ವ್ಯಾಟ್ ಕಡಿತ ಮಾಡದೇ ಕೇಂದ್ರವೇ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲು ಮುಂದಾಗಲಿ ಎಂದು ಒತ್ತಾಯಿಸಿವೆ.

ಈಗ ದಾಖಲೆಯ ಮಟ್ಟಕ್ಕೆ ತೈಲ ಬೆಲೆ ಏರಿಕೆಯಾಗಿರುವುದರಿಂದ ಮತ್ತೆ ಅಬಕಾರಿ ಸುಂಕವನ್ನು ಇಳಿಕೆ ಮಾಡಬೇಕೆಂಬ ಒತ್ತಡ ಕೇಳಿ ಬಂದಿದೆ. ಆದರೆ, ಅಬಕಾರಿ ಸುಂಕವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...