alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ಬಳಕೆದಾರರಿಗೆ ಶಾಕಿಂಗ್ ಸುದ್ದಿ…!

ಸಾಮಾಜಿಕ ಜಾಲತಾಣ ಫೇಸ್ ಬುಕ್, ತನ್ನ ಬಳಕೆದಾರರ ಮಾಹಿತಿಯನ್ನು ಕೇಂಬ್ರಿಜ್ ಅನಾಲಿಟಿಕಾಗೆ ಸೋರಿಕೆ ಮಾಡಿರುವ ಕುರಿತು ವಿಶ್ವದಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಬಳಕೆದಾರರ ಮಾಹಿತಿ ಸಂರಕ್ಷಿಸುವಲ್ಲಿ ವಿಫಲರಾದ ಕಾರಣ ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಾಯವೂ ಕೇಳಿ ಬರುತ್ತಿದೆ.

ಫೇಸ್ ಬುಕ್ ನಿಂದಾದ ಪ್ರಮಾದದ ಕುರಿತು ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್, ಬೇಷರತ್ ಕ್ಷಮೆ ಯಾಚಿಸಿದ್ದರಲ್ಲದೇ ಇನ್ನು ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಾಗಿ ಹೇಳಿಕೊಂಡಿದ್ದರು.

ಈ ಮಧ್ಯೆ ಕೇಂಬ್ರಿಜ್ ಅನಾಲಿಟಿಕಾಗೆ ಭಾರತೀಯ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವ ಕುರಿತು ಮಾಹಿತಿ ನೀಡುವಂತೆ ಫೇಸ್ ಬುಕ್ ಗೆ ಕೇಂದ್ರ ಸರ್ಕಾರ ನೋಟೀಸ್ ನೀಡಿತ್ತು. ಇದಕ್ಕೆ ಫೇಸ್ ಬುಕ್ ಉತ್ತರ ನೀಡಿದ್ದು, 5.6 ಲಕ್ಷ ಮಂದಿ ಭಾರತೀಯರ ಮಾಹಿತಿ ಸೋರಿಕೆಯಾಗಿರುವುದಾಗಿ ಒಪ್ಪಿಕೊಂಡಿದೆ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಭಾರತೀಯ ಬಳಕೆದಾರರ ಮಾಹಿತಿ ಸೋರಿಕೆಯಾಗುವುದನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...