alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳೆಗಾರರಿಗೆ ಶಾಕಿಂಗ್ ನ್ಯೂಸ್! ಕುಸಿತವಾಯ್ತು ತೊಗರಿ ದರ

ವಿಜಯಪುರ: ತೊಗರಿ ಬೆಳೆದು ಒಳ್ಳೆಯ ಬೆಲೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ತೊಗರಿ ದರ ಕುಸಿತವಾಗಿದೆ. ಮಾರುಕಟ್ಟೆಗೆ ತೊಗರಿ ಬರುತ್ತಿದ್ದರೂ, ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಇನ್ನೂ ಆರಂಭಿಸಿಲ್ಲ.

ಮಾರುಕಟ್ಟೆಯಲ್ಲಿ ತೊಗರಿ ಕ್ವಿಂಟಾಲ್ ಗೆ 3,800 ರೂ.ನಿಂದ 4,200 ರೂ. ಇದೆ. ಖರೀದಿ ಕೇಂದ್ರ ಆರಂಭವಾಗದ ಕಾರಣ ರೈತರು ಸಿಕ್ಕ ಬೆಲೆಗೆ ಮಾರಾಟ ಮಾಡತೊಡಗಿದ್ದಾರೆ.

ಕಳೆದ ವರ್ಷ ತಡವಾಗಿ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಿದ್ದ ಸರ್ಕಾರ ಈ ಬಾರಿ ಬೇಗನೆ ಖರೀದಿ ಕೇಂದ್ರ ಆರಂಭಿಸಬಹುದೆಂಬ ನಿರೀಕ್ಷೆ ಇತ್ತು. ಆದರೆ, ಬೆಳೆ ಬಂದರೂ ಖರೀದಿ ಕೇಂದ್ರ ಆರಂಭವಾಗದ ಕಾರಣ ರೈತರು ಕಡಿಮೆ ಬೆಲೆಗೆ ಮಾರಾಟ ಮಾಡುವಂತಾಗಿದೆ. ಮಧ್ಯವರ್ತಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕಡಿಮೆ ಬೆಲೆಯಲ್ಲಿ ರೈತರಿಂದ ಬೆಳೆ ಖರೀದಿಸುತ್ತಿದ್ದಾರೆ.

ಈ ಬಾರಿ ತೊಗರಿ ಬೆಳೆ ಉತ್ತಮವಾಗಿದ್ದು, ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಒಳ್ಳೆಯ ಬೆಲೆ ಸಿಗದೇ ತೊಂದರೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...