alex Certify
ಕನ್ನಡ ದುನಿಯಾ       Mobile App
       

Kannada Duniya

ಆದಾಯ ತೆರಿಗೆ, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ

ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದು, ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ ನೀಡಲಿದ್ದಾರೆ.

ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ವಿಸ್ತರಿಸುವ ಸಾಧ್ಯತೆ ಇದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಬಜೆಟ್ ನಲ್ಲಿ ಮಧ್ಯಮ ವರ್ಗದ ಜನರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಲು ಚಿಂತನೆ ನಡೆದಿದೆ. ಇದರೊಂದಿಗೆ ಆರೋಗ್ಯ ವಿಮೆ ಸೌಲಭ್ಯ ಹೆಚ್ಚಿಸುವ ನಿರೀಕ್ಷೆ ಇದೆ.

ಪ್ರಸ್ತುತ ವಾರ್ಷಿಕ 2.5 ಲಕ್ಷ ರೂ. ವರೆಗೆ ಆದಾಯ ತೆರಿಗೆ ಇಲ್ಲ. ಸಾರ್ವಜನಿಕ ಭವಿಷ್ಯನಿಧಿ ಅಥವಾ ಸೆಕ್ಷನ್ 80 ಸಿ ಅಡಿಯಲ್ಲಿನ ಹೂಡಿಕೆಗಳಿಗೆ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿಯ ಅನುಕೂಲವನ್ನು ಪಡೆಯಬಹುದಾಗಿದೆ.

ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ವಿಸ್ತರಿಸಲು ಮುಂದಾಗಿದ್ದು, ತೆರಿಗೆ ಕಡಿತ, ಆರೋಗ್ಯ ವಿಮೆಗೆ ಸೌಲಭ್ಯ ಹೆಚ್ಚಳ, ಬ್ಯಾಂಕ್ ಠೇವಣಿಗೆ ಉತ್ತೇಜನ ನೀಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...