alex Certify
ಕನ್ನಡ ದುನಿಯಾ       Mobile App
       

Kannada Duniya

ಮಲ್ಟಿಪ್ಲೆಕ್ಸ್ ಗೆ ತೆಗೆದುಕೊಂಡು ಹೋಗ್ಬಹುದು ಹೊರಗಿನ ತಿಂಡಿ

ಚಲನಚಿತ್ರ ಪ್ರಿಯರಿಗೊಂದು ಖುಷಿ ಸುದ್ದಿ. ಮಲ್ಟಿಪ್ಲೆಕ್ಸ್ ನಲ್ಲಿ ಸಾಮಾನ್ಯ ಬೆಲೆಗೆ ಆಹಾರ, ನೀರು ಸಿಗಲಿದೆ. ಬಾಂಬೆ ಹೈಕೋರ್ಟ್ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ.

ಮಲ್ಟಿಪ್ಲೆಕ್ಸ್ ನಲ್ಲಿ ಪ್ರೇಕ್ಷಕರು ಹೊರಗಿನ ತಿಂಡಿ, ಜ್ಯೂಸ್, ನೀರನ್ನು ತರುವಂತಿರಲಿಲ್ಲ. ಸಿನಿಮಾ ಟಿಕೆಟ್ ಜೊತೆ ಆಹಾರದಿಂದಲೂ ಹಣ ಬರಲಿ ಎನ್ನುವ ಕಾರಣಕ್ಕೆ ಮಲ್ಟಿಪ್ಲೆಕ್ಸ್ ಗಳಲ್ಲಿ ಈ ನಿಯಮ ವಿಧಿಸಲಾಗಿತ್ತು. ಪ್ರಕರಣವೊಂದರ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಹೊರಗಿನ ತಿಂಡಿಯನ್ನು ಸಿನಿಮಾ ಹಾಲ್ ಗೆ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ. ಜೊತೆಗೆ ಮಲ್ಟಿಪ್ಲೆಕ್ಸ್ ನಲ್ಲಿ ಸಿಗುವ ಆಹಾರದ ಬೆಲೆಯನ್ನು ಇಳಿಕೆ ಮಾಡುವಂತೆ ಸೂಚನೆ ನೀಡಿದೆ.

ಮಲ್ಟಿಪ್ಲೆಕ್ಸ್ ಈ ನೀತಿ ವಿರುದ್ಧ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಮಲ್ಟಿಪ್ಲೆಕ್ಸ್ ನಲ್ಲಿ ಸಿಗುವ ಆಹಾರ, ಜ್ಯೂಸ್ ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಯಸ್ಕರೂ ಇದ್ರಿಂದ ತೊಂದರೆ ಅನುಭವಿಸುತ್ತಿದ್ದಾರೆಂದು ಅರ್ಜಿಯಲ್ಲಿ ದೂರಲಾಗಿತ್ತು. ಬಾಂಬೆ ಹೈಕೋರ್ಟ್ ತೀರ್ಪಿನ ನಂತ್ರ ಮಹಾರಾಷ್ಟ್ರ ಸರ್ಕಾರ ಆಹಾರ ವಸ್ತುಗಳ ಬೆಲೆ ನಿಯಂತ್ರಣ ನೀತಿಯನ್ನು ಸಿದ್ಧಪಡಿಸುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...