alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರು, ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಶುಲ್ಕವನ್ನು ಶೇ. 5 ರಿಂದ ಶೇ. 7 ರಷ್ಟು ಏರಿಕೆ ಮಾಡಿದ್ದು, ವಾಹನ ಸವಾರರಿಗೆ ಹೊರೆ ಬೀಳಲಿದೆ.

ಮಾರ್ಚ್ 31 ರ ಮಧ್ಯರಾತ್ರಿಯಿಂದಲೇ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಏರಿಕೆಯಾಗಿದ್ದು, ವಾಹನ ಸವಾರರ ಜೇಬಿಗೆ ಹೊರೆಯಾಗಿದೆ. ಬಹುತೇಕ ಟೋಲ್ ಪ್ಲಾಜಾಗಳಲ್ಲಿ ಶೇ. 5 ರಷ್ಟು ಶುಲ್ಕ ಏರಿಕೆಯಾಗಿದೆ. ಇದರೊಂದಿಗೆ ತಿಂಗಳ ಪಾಸ್ ದರಗಳನ್ನು ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಏರಿಕೆ ಮಾಡಿದೆ.

ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಏಪ್ರಿಲ್ 1 ರಿಂದ ಇ –ವೇ ಬಿಲ್ ಜಾರಿಗೆ ಬಂದಿದೆ. ಇದರೊಂದಿಗೆ ಟೋಲ್ ಶುಲ್ಕವನ್ನು ಏರಿಕೆ ಮಾಡಿರುವುದರಿಂದ ಅಗತ್ಯವಸ್ತುಗಳ ಬೆಲೆಯಲ್ಲಿಯೂ ಏರಿಕೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...