alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರ ಮೊಗದಲ್ಲಿ ನಗು ಮೂಡಿಸಿದ ಪೆಟ್ರೋಲ್-ಡಿಸೇಲ್ ಬೆಲೆ

ಕೆಲ ದಿನಗಳಿಂದ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಯಾಗ್ತಿದೆ. ಭಾನುವಾರ ಕೂಡ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡಿದ್ದು, ವಾಹನ ಸವಾರರ ಮುಖದಲ್ಲಿ ನಗು ಮೂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದು, ಇದೇ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಗೆ ಕಾರಣವಾಗಿದೆ.

ಭಾನುವಾರ ದೆಹಲಿ-ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 9 ಪೈಸೆ ಇಳಿಕೆಯಾಗಿದೆ. ಡಿಸೇಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೆಲ ದಿನಗಳ ಹಿಂದೆಯೇ ಪೆಟ್ರೋಲ್-ಡಿಸೇಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಾಗಿ ಕೇರಳ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಅದ್ರಂತೆ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಒಂದು ರೂಪಾಯಿ ಇಳಿಕೆ ಮಾಡಲು ನಿರ್ಧರಿಸಿದೆ. ಜೂನ್ 1 ರಿಂದ ಇದು ಜಾರಿಗೆ ಬಂದಿದೆ.

ಐಒಸಿ ವೆಬ್ಸೈಟ್ ನೀಡಿದ ವರದಿ ಪ್ರಕಾರ ದೆಹಲಿಯಲ್ಲಿ ಭಾನುವಾರ ಒಂದು ಲೀಟರ್ ಪೆಟ್ರೋಲ್ ಬೆಲೆ 78.11  ರೂಪಾಯಿ ಹಾಗೂ ಡಿಸೇಲ್ ಬೆಲೆ 69.11 ರೂಪಾಯಿಗೆ ಬಂದು ನಿಂತಿದೆ. ಕಳೆದ 16 ದಿನಗಳಿಂದ ಪೆಟ್ರೋಲ್ ಬೆಲೆಯಲ್ಲಿ 4 ರೂಪಾಯಿ ಹಾಗೂ ಡಿಸೇಲ್ ಬೆಲೆಯಲ್ಲಿ 3.62 ರೂಪಾಯಿ ಏರಿಕೆಯಾಗಿತ್ತು. ನಾಲ್ಕೈದು ದಿನಗಳಿಂದ ಪೆಟ್ರೋಲ್ ಬೆಲೆಯಲ್ಲಿ ನಿಧಾನ ಇಳಿಕೆ ಕಾಣ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...