alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಂದು ಏರಿಕೆಯಾಗಿದ್ದು ಎಷ್ಟು ಗೊತ್ತಾ?

 

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 19 ದಿನಗಳಿಂದ ಏರಿಕೆಯಾಗದಿದ್ದ ಪೆಟ್ರೋಲ್-ಡೀಸೆಲ್ ಬೆಲೆ ಚುನಾವಣೆ ಮುಗಿದ ಬಳಿಕ, ಕಳೆದ 12 ದಿನಗಳಿಂದ ಏರಿಕೆಯಾಗುತ್ತಲೇ ಸಾಗಿದ್ದು, ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿದೆ.

ಇಂದು ಕೂಡಾ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆಯಲ್ಲಿ 32 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 18 ಪೈಸೆ ಏರಿಕೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ನೂತನ ದರ ಜಾರಿಗೆ ಬಂದಿದೆ.

ಈಗ ಪೆಟ್ರೋಲ್ ಬೆಲೆ ದೆಹಲಿಯಲ್ಲಿ 77.83 ರೂ., ಮುಂಬೈನಲ್ಲಿ 85.65, ಕೋಲ್ಕತ್ತಾ 80.47 ಹಾಗೂ ಚೆನ್ನೈನಲ್ಲಿ 88.80 ರೂ. ಗಳಾಗಿದೆ. ಅದೇ ರೀತಿ ಡೀಸೆಲ್ ಬೆಲೆ ದೆಹಲಿಯಲ್ಲಿ 68.75, ಮುಂಬೈನಲ್ಲಿ 73.2, ಕೋಲ್ಕತ್ತದಲ್ಲಿ 71.30 ಹಾಗೂ ಚೆನ್ನೈನಲ್ಲಿ 72.58 ರೂ. ಗಳಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಾಣುತ್ತಿರುವುದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಗೆ ಕಾರಣವೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...