alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡೀಸೆಲ್ ಬೆಲೆ: ಇಂದು ಏರಿಕೆಯಾಗಿರುವುದೆಷ್ಟು?

ವಾಹನ ಸವಾರರನ್ನು ಹೈರಾಣಾಗಿಸಿರುವ ಪೆಟ್ರೋಲ್-ಡೀಸೆಲ್ ಬೆಲೆ ಸದ್ಯಕ್ಕೆ ಇಳಿಯುವ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಂದೂ ಕೂಡ ಹೆಚ್ಚಳವಾಗಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 82.86 ರೂ. ತಲುಪಿದ್ದು, ಅದೇ ರೀತಿ ಡೀಸೆಲ್ ಬೆಲೆ 74.12 ರೂ.ಗಳಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ದೇಶದಲ್ಲೇ ಅತ್ಯಧಿಕವಾಗಿದ್ದು, ಇಂದು ಪೆಟ್ರೋಲ್ 90.22 ರೂ. ಗಳಿಗೆ ಹಾಗೂ ಡೀಸೆಲ್ 78.69 ರೂ. ಗಳಿಗೆ ಮಾರಾಟವಾಗುತ್ತಿದೆ. ಇತರೆ ಮೆಟ್ರೋ ನಗರಗಳಲ್ಲೂ ಇಂದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಯಿಂದಾಗಿ ಭಾರತೀಯ ತೈಲ ಕಂಪನಿಗಳು ದರ ಏರಿಕೆ ಮಾಡುತ್ತಿದ್ದು, ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯವೂ ದರ ಏರಿಕೆಗೆ ಮತ್ತೊಂದು ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...