alex Certify
ಕನ್ನಡ ದುನಿಯಾ       Mobile App
       

Kannada Duniya

ಗರಿಷ್ಠ ಮಟ್ಟಕ್ಕೇರಿದ ಪೆಟ್ರೋಲ್ ಬೆಲೆ, ಕೇಂದ್ರದಿಂದ ಸಿಗುತ್ತಾ ಸಿಹಿ ಸುದ್ದಿ…?

ನವದೆಹಲಿ: ತೈಲ ಬೆಲೆ 55 ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಬೇಕೆಂದು ಪೆಟ್ರೋಲಿಯಂ ಸಚಿವಾಲಯ ಹಣಕಾಸು ಸಚಿವಾಲಯಕ್ಕೆ ಕೋರಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ವಿದ್ಯಮಾನಗಳಿಂದಾಗಿ ತೈಲದ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ಬರೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆ ಬರೆಯುತ್ತಿರುವುದರಿಂದ ಗ್ರಾಹಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಗೆ 19.48 ರೂ., ಡೀಸೆಲ್ ಗೆ 15.33 ರೂ. ಅಬಕಾರಿ ಸುಂಕ ವಿಧಿಸಿದೆ. ಕಳೆದ ವರ್ಷ ಜೂನ್ ನಿಂದ ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ದಿನವೂ ಬೆಲೆ ಏರಿಕೆಯಾಗುತ್ತಿದ್ದರೂ ಗ್ರಾಹಕರ ಗಮನಕ್ಕೆ ಬರುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬಲು ದುಬಾರಿಯಾಗಿದೆ.

ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಗೆ 19.48 ರೂ., ಡೀಸೆಲ್ ಗೆ 15.33 ರೂ. ಅಬಕಾರಿ ಸುಂಕ ವಿಧಿಸಿದ್ದು, ಇದರೊಂದಿಗೆ ರಾಜ್ಯಗಳ ಮಾರಾಟ ತೆರಿಗೆ ಅಥವಾ ವ್ಯಾಟ್ ಕೂಡ ಹಾಕಲಾಗುತ್ತದೆ. ಇದು ರಾಜ್ಯಗಳಿಂದ ರಾಜ್ಯಗಳಿಗೆ ಬದಲಾಗುತ್ತದೆ.

ದೆಹಲಿಯಲ್ಲಿ ಪೆಟ್ರೋಲ್ ಮೇಲೆ 15.84 ರೂ. ವ್ಯಾಟ್ ಇದ್ದು, ಡೀಸೆಲ್ ಗೆ 9.68 ರೂ. ವ್ಯಾಟ್ ಇದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾದಾಗ ಕೇಂದ್ರ ಸರ್ಕಾರ 2014 ರ ನವೆಂಬರ್ ನಿಂದ 2016 ಜನವರಿ ನಡುವೆ 9 ಸಲ ಅಬಕಾರಿ ಸುಂಕ ಏರಿಕೆ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ಲೀಟರ್ ಗೆ 2 ರೂ. ಅಬಕಾರಿ ಸುಂಕ ಕಡಿಮೆ ಮಾಡಿದ ಕೇಂದ್ರ ಸರ್ಕಾರ ವ್ಯಾಟ್ ಇಳಿಕೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಆದರೆ, ಒಂದೆರಡು ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಬೆಲೆ ಇಳಿಕೆ ಮಾಡಿಲ್ಲ. ಕೇಂದ್ರವೇ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿವೆ.

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆಯಾದ ಹಿನ್ನಲೆಯಲ್ಲಿ ಅಬಕಾರಿ ಸುಂಕ ಕಡಿಮೆ ಮಾಡಲು ಪೆಟ್ರೋಲಿಯಂ ಸಚಿವಾಲಯ ಹಣಕಾಸು ಮಂತ್ರಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...