alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಶಾಕ್: ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ

ಪೆಟ್ರೋಲ್-ಡೀಸೆಲ್ ದರ ಏರಿಕೆ ಸದ್ಯಕ್ಕಂತೂ ನಿಲ್ಲುವಂತೆ ಕಾಣುತ್ತಿಲ್ಲ. ದರ ಏರಿಕೆಯಿಂದ ಕಂಗಾಲಾಗಿರುವ ವಾಹನ ಸವಾರರಿಗೆ ಕೊಂಚ ರಿಲೀಫ್ ನೀಡುವ ಸಲುವಾಗಿ ಕೇಂದ್ರ ಸರ್ಕಾರ, ಅಬಕಾರಿ ಸುಂಕ ಕಡಿತಗೊಳಿಸಿತ್ತಾದರೂ ದರ ಏರಿಕೆಯ ಈಗಿನ ಲಕ್ಷಣಗಳನ್ನು ಗಮನಿಸಿದರೆ ಮತ್ತೆ ಹಿಂದಿನ ಮಟ್ಟಕ್ಕೇ ಬಂದು ತಲುಪುವ ಸಾಧ್ಯತೆ ಇದೆ.

ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 10 ಪೈಸೆ ಏರಿಕೆಯೊಂದಿಗೆ 82.36 ರೂಪಾಯಿ ತಲುಪಿದ್ದರೆ, ಡೀಸೆಲ್ ಬೆಲೆಯಲ್ಲಿ 27 ಪೈಸೆ ಏರಿಕೆಯಾಗುವ ಮೂಲಕ ಪ್ರತಿ ಲೀಟರ್ ಗೆ 74.62 ರೂ. ಗಳಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 90 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 87.82 ರೂಪಾಯಿಗಳಾಗಿದ್ದರೆ, 29 ಪೈಸೆ ಏರಿಕೆಯೊಂದಿಗೆ ಡೀಸೆಲ್ ದರ ಪ್ರತಿ ಲೀಟರ್ ಗೆ 78.22 ರೂಪಾಯಿಗೆ ತಲುಪಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...