alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್- ಡಿಸೇಲ್ ಬೆಲೆ ಹೆಚ್ಚಳ ಸಾಧ್ಯತೆ

petrole

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ, ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೆಟ್ರೋಲ್ ಲೀಟರ್ ಗೆ 6 ರೂಪಾಯಿ ಹೆಚ್ಚಾಗಬಹುದೆಂದು ಹೇಳಲಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಶಾಕಿಂಗ್ ಸುದ್ದಿ ಇದಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ 15 ರಷ್ಟು ಹೆಚ್ಚಳವಾಗಿದೆ. ಇದನ್ನು ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಪರಿಷ್ಕರಿಸಲಿದ್ದು, ಪೆಟ್ರೋಲ್ ಲೀಟರ್ ಗೆ 6 ರೂ ಹೆಚ್ಚಾಗಬಹುದೆಂದು ಹೇಳಲಾಗಿದೆ.

ಅದೇ ರೀತಿ ಡೀಸೆಲ್ ಬೆಲೆಯಲ್ಲೂ ಏರಿಕೆಯಾಗಲಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ಪೆಟ್ರೋಲ್ 6 ರೂ. ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...