alex Certify
ಕನ್ನಡ ದುನಿಯಾ       Mobile App
       

Kannada Duniya

ಶುಕ್ರವಾರದಂದು ಮತ್ತೆ ಇಳಿಕೆ ಕಂಡ ಬಂಗಾರ

ಚಿನ್ನದ ಬೆಲೆಯಲ್ಲಿ ಶುಕ್ರವಾರ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಶುಕ್ರವಾರ 235 ರೂಪಾಯಿ ಇಳಿಕೆ ಕಂಡಿದೆ. ಗುರುವಾರ ಬಂಗಾರದ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಕಂಡು ಬಂದಿತ್ತು.

ಸ್ಥಳೀಯ ಮಾರುಕಟ್ಟೆಯಲ್ಲಿ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗಿರುವುದು ಬೆಲೆ ಇಳಿಕೆಗೆ ಕಾರಣವಾಗಿದೆ. 235 ರೂಪಾಯಿ ಇಳಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ 32,015 ರೂಪಾಯಿಯಾಗಿದೆ. ಬೆಳ್ಳಿ ಬೆಲೆ ಕೆ.ಜಿ.ಗೆ 37,900 ರೂಪಾಯಿಯಾಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡು ಬಂದಿರುವುದ್ರಿಂದ ಆಮದು ಅಗ್ಗವಾಗಿದೆ. ಇದು ರೂಪಾಯಿ ಮೌಲ್ಯ 25 ಪೈಸೆ ಹೆಚ್ಚಳ ಕಂಡು ಡಾಲರ್ ಎದುರು 71.72ಕ್ಕೆ ತಲುಪಿದೆ.

ದೆಹಲಿ ಮಾರುಕಟ್ಟೆಯಲ್ಲಿ ಶೇಕಡಾ 99.9 ಹಾಗೂ ಶೇಕಡಾ 99.5ರಷ್ಟು ಶುದ್ಧ ಬಂಗಾರ 32,015 ಮತ್ತು 31,865 ರೂಪಾಯಿ ಪ್ರತಿ ಹತ್ತು ಗ್ರಾಂಗೆ ಮಾರಾಟವಾಗ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇಕಡಾ 0.17 ರಷ್ಟು ಏರಿಕೆ ಕಂಡು 1216 ಡಾಲರ್ ಪ್ರತಿ ಔನ್ಸ್ ಆಗಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...