alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನ ಖರೀದಿದಾರರಿಗೆ ಕಾದಿದೆ ಶಾಕ್: ದೀಪಾವಳಿ ವೇಳೆಗೆ ಗಗನ ಮುಟ್ಟಲಿದೆ ಬೆಲೆ?

ಹಳದಿ ಲೋಹ ಚಿನ್ನದ ಮೇಲಿನ ಭಾರತೀಯರ ವ್ಯಾಮೋಹ ತಿಳಿದಿರುವಂಥದ್ದೇ. ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಚಿನ್ನದ ಖರೀದಿ ಭರಾಟೆ ಜೋರಾಗಿರುತ್ತದೆ. ಈಗ ಮದುವೆ ಸೀಸನ್ ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ.

ಎರಡು ದಿನಗಳ ಹಿಂದಷ್ಟೇ ಚಿನ್ನದ ಬೆಲೆಯಲ್ಲಿ ಸುಮಾರು 250 ರೂ. ಏರಿಕೆಯಾಗಿದ್ದರ ಮಧ್ಯೆ, ದೀಪಾವಳಿ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 34 ಸಾವಿರ ರೂ. ತಲುಪುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದಾರೆ.

ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆಯಾಗುತ್ತಿರುವುದು ಹಾಗೂ ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಲಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆ ಮೇಲೆ ಬೀರಲಿದೆ ಎನ್ನಲಾಗಿದೆ.

ಸದ್ಯಕ್ಕೆ ಷೇರು ಪೇಟೆಯಿಂದ ಉತ್ತಮ ಗಳಿಕೆ ಬರುತ್ತಿರುವ ಕಾರಣ ಹೂಡಿಕೆದಾರರು ತಮ್ಮ ಗಮನವನ್ನು ಚಿನ್ನದತ್ತ ಹರಿಸುತ್ತಿಲ್ಲ. ಹೀಗಾಗಿ ಬೇಡಿಕೆ ಹೆಚ್ಚಿಲ್ಲದ ಕಾರಣ ಬೆಲೆಯಲ್ಲಿ ಅಷ್ಟು ವ್ಯತ್ಯಾಸವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಬರುವ ನಿರೀಕ್ಷೆ ಇದ್ದು, ಇದು ಕೂಡ ಬೆಲೆ ಹೆಚ್ಚಾಗಲು ಕಾರಣವಾಗಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...