alex Certify
ಕನ್ನಡ ದುನಿಯಾ       Mobile App
       

Kannada Duniya

ಅಬ್ಬಬ್ಬಾ! ಚಿನ್ನದ ಬೆಲೆ ಕೇಳಿದ್ರೇ….

gold-wed-nig

ನವದೆಹಲಿ: ದೇಶದಲ್ಲಿ 500 ರೂ., 1000 ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಗೊಳಿಸಿದ್ದು ಮತ್ತು ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದು ಮಾರುಕಟ್ಟೆಯಲ್ಲಿ ಹಲವು ಬೆಳವಣಿಗೆಗಳಿಗೆ ಕಾರಣವಾಗಿದೆ.

ವಿಶ್ವ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಔನ್ಸ್ ಗೆ 1300 ಅಮೆರಿಕನ್ ಡಾಲರ್ ವರೆಗೂ ಏರಿಕೆಯಾಗಿದೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಹಣಕಾಸು ನೀತಿ ಬದಲಾವಣೆಯ ಅನಿಶ್ಚಿತತೆ ಉಂಟಾಗಿದೆ. ಇದರಿಂದಾಗಿ ಚಿನ್ನದ ಮೇಲೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ. ಪರಿಣಾಮ ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 900 ರೂ.ಜಾಸ್ತಿಯಾಗಿ 31, 750 ರೂಪಾಯಿಗೆ ಏರಿಕೆಯಾಗಿದೆ.

ಚಿನ್ನದ ಬೆಲೆ 31,750 ರೂಪಾಯಿಗೆ ಏರಿಕೆಯಾಗಿರುವುದು, ಕಳೆದ 3 ವರ್ಷಗಳ ಅವಧಿಯಲ್ಲಿ ಅತಿಹೆಚ್ಚಿನ ಬೆಲೆಯಾಗಿದೆ ಎಂದು ಹೇಳಲಾಗಿದೆ. ಜಾಗತಿಕ ಮಾರುಕಟ್ಟೆಯ ಸ್ಥಿತಿಗತಿ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಳಿತವಾಗುತ್ತದೆ. ಅದರಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...