alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾಗಲಿದೆ ಹಣಕಾಸು ವರ್ಷ

arund-d

ನವದೆಹಲಿ: ಸದ್ಯ ಜಾರಿಯಲ್ಲಿರುವ ಹಣಕಾಸು ವರ್ಷವನ್ನು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಏಪ್ರಿಲ್ ನಿಂದ ಮಾರ್ಚ್ ವರೆಗೆ ಇರುವ ಹಣಕಾಸು ವರ್ಷವನ್ನು ಜನವರಿಯಿಂದ ಡಿಸೆಂಬರ್ ವರೆಗೆ ಬದಲಾವಣೆ ಮಾಡಲು ಪರಿಶೀಲನೆ ನಡೆಸಲಾಗಿದೆ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಮಾಜಿ ಆರ್ಥಿಕ ಸಲಹೆಗಾರ ಶಂಕರ್ ಆಚಾರ್ಯ ಅವರ ನೇತೃತ್ವದಲ್ಲಿ ಹಣಕಾಸು ವರ್ಷ ಬದಲಾವಣೆ ಕುರಿತಾಗಿ ಸಮಿತಿ ರಚಿಸಿದ್ದು, ಈ ಸಮಿತಿ ನೀಡಿರುವ ವರದಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅನೇಕ ದೇಶಗಳಲ್ಲಿ ಕ್ಯಾಲೆಂಡರ್ ವರ್ಷವನ್ನೇ ಆರ್ಥಿಕ ವರ್ಷವಾಗಿ ಪರಿಗಣಿಸಲಾಗಿದೆ. ಮಳೆಗಾಲ ಆರಂಭಕ್ಕೂ ಮೊದಲೇ ಯೋಜನೆಗಳಿಗೆ ಮೀಸಲಾದ ಅನುದಾನ ಬಳಸಿಕೊಳ್ಳಲು ಆರ್ಥಿಕ ವರ್ಷ ಬದಲಾಯಿಸುವುದು ಸೂಕ್ತ ಎಂದು ಶಂಕರ್ ಆಚಾರ್ಯ ಸಮಿತಿ ವರದಿಯಲ್ಲಿ ಹೇಳಿದೆ. ಪರಿಶೀಲನೆ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಜೇಟ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...