alex Certify
ಕನ್ನಡ ದುನಿಯಾ       Mobile App
       

Kannada Duniya

ಉಳಿತಾಯ ಯೋಜನೆ ಖಾತೆದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಸಣ್ಣ ಉಳಿತಾಯ ಯೋಜನೆ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವ ಗಡುವನ್ನು ಸರ್ಕಾರ ವಿಸ್ತರಿಸಿದೆ. ಪೋಸ್ಟ್ ಆಫೀಸ್ ಠೇವಣಿ, ಕಿಸಾನ್ ವಿಕಾಸ್ ಪತ್ರ ಮೊದಲಾದವುಗಳಿಗೆ 2018 ರ ಮಾರ್ಚ್ 31 ರ ವರೆಗೆ ಆಧಾರ್ ಜೋಡಣೆಗೆ ಅವಕಾಶ ನೀಡಲಾಗಿದೆ.

2017 ರ ಡಿಸೆಂಬರ್ 31 ಆಧಾರ್ ಜೋಡಣೆಗೆ ಅಂತಿಮ ದಿನವಾಗಿತ್ತು. ಅದನ್ನು ಮಾರ್ಚ್ 31 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಅಂಚೆ ಕಚೇರಿಯ ಸಣ್ಣ ಉಳಿತಾಯ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ ಯೋಜನೆ(NSC), ಕಿಸಾನ್ ವಿಕಾಸ್ ಪತ್ರ(KVP) ಮೊದಲಾದವುಗಳಿಗೆ ಆಧಾರ್ ಅನ್ನು ಕಡ್ಡಾಯಗೊಳಿಸಿ ಕಳೆದ ಅಕ್ಟೋಬರ್ ನಲ್ಲಿ ಆದೇಶ ಹೊರಡಿಸಲಾಗಿತ್ತು. ಡಿಸೆಂಬರ್ ಅಂತ್ಯದೊಳಗೆ ಆಧಾರ್ ಲಿಂಕ್ ಮಾಡಲು ಸೂಚನೆ ನೀಡಲಾಗಿತ್ತು.

ಸರ್ಕಾರದ ವಿವಿಧ ಯೋಜನೆ, ಮೊಬೈಲ್, ಬ್ಯಾಂಕ್ ಮೊದಲಾದವುಗಳಿಗೆ ಆಧಾರ್ ಕಡ್ಡಾಯವಾಗಿದ್ದು, ಮಾರ್ಚ್ 31 ರ ವರೆಗೂ ಜೋಡಣೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಪೋಸ್ಟ್ ಆಫೀಸ್ ಉಳಿತಾಯ ಖಾತೆಗಳಿಗೆ ಆಧಾರ್ ಜೋಡಣೆ ಗಡುವು ವಿಸ್ತರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...