alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾಗಲಿದೆ ಆದಾಯ ತೆರಿಗೆ ಕಾಯ್ದೆ

ನವದೆಹಲಿ: ಜಾರಿಯಲ್ಲಿರುವ 50 ವರ್ಷಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಿ, ಹೊಸ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

2009 ರಲ್ಲಿ ಯು.ಪಿ.ಎ. ಸರ್ಕಾರ ನೇರ ತೆರಿಗೆ ಬದಲಾವಣೆಗೆ ಮುಂದಾಗಿ ನಿಯಮಗಳನ್ನು ಸರಳಗೊಳಿಸಲು ಮುಂದಾಗಿತ್ತಾದರೂ, ಕಾರಣಾಂತರದಿಂದ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಪ್ರಸ್ತುತ ಆದಾಯ ತೆರಿಗೆ ಮಿತಿ 2.5 ಲಕ್ಷ ರೂ. ಇದೆ.

ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ ನಲ್ಲಿ ನಡೆದ ತೆರಿಗೆ ಅಧಿಕಾರಿಗಳ ಸಮ್ಮೇಳನದಲ್ಲಿ ಆದಾಯ ತೆರಿಗೆ ಕಾಯ್ದೆ -1961 ರ ಬದಲಿಗೆ ಹೊಸ ಕಾಯ್ದೆ ತರಬೇಕಾದ ಅವಶ್ಯಕತೆಯನ್ನು ಮನಗಂಡಿದ್ದರು.

ಈಗ ಕಾಯ್ದೆ ಬದಲಾವಣೆಗೆ ಪ್ರಕ್ರಿಯೆ ಆರಂಭವಾಗಿದೆ. 50 ವರ್ಷ ಹಳೆಯ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಿ ಹೊಸ ಕಾಯ್ದೆ ಜಾರಿಗೆ ತರಲು ಕರಡು ರೂಪಿಸಲು ಸಮಿತಿಯೊಂದನ್ನು ರಚಿಸಲಾಗಿದೆ.

ಈ ಸಮಿತಿ 6 ತಿಂಗಳ ಒಳಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಸಮಿತಿಗೆ ಕೇಂದ್ರ ನೇರ ತೆರಿಗೆ ಮಂಡಳಿ ಸದಸ್ಯ ಅರಬಿಂದ್ ಮೋದಿ ಸಂಚಾಲಕರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...