alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಜೊತೆ ಲಿಂಕ್ ಮಾಡದೇ ಇದ್ರೆ ರದ್ದಾಗಲಿದೆ ಪ್ಯಾನ್ ಕಾರ್ಡ್….

ಈಗ ಸರ್ಕಾರದ ಎಲ್ಲಾ ಸೇವೆಗಳಿಗೂ ಆಧಾರ್ ಕಾರ್ಡ್ ಕಡ್ಡಾಯ. ಆದಾಯ ತೆರಿಗೆ ಪಾವತಿಸಲು ಕೂಡ ಆಧಾರ್ ಕಾರ್ಡ್ ಬೇಕು. ನೀವೇನಾದ್ರೂ ಹೊಸ ಪ್ಯಾನ್ ನಂಬರ್ ಪಡೆಯುತ್ತಿದ್ರೆ ಅದಕ್ಕೂ ಆಧಾರ್ ಲಿಂಕ್ ಮಾಡಬೇಕು. ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ಗಡುವು ಕೂಡ ನೀಡಿತ್ತು.

ಈ ಕೇಸ್ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇದೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನಿರ್ದಿಷ್ಟ ಗಡುವು ನೀಡಲಿದೆ. ಆ ಅವಧಿಯೊಳಗೆ ಲಿಂಕ್ ಮಾಡದೇ ಇದ್ದಲ್ಲಿ, ಪ್ಯಾನ್ ಕಾರ್ಡ್ ರದ್ದು ಮಾಡಲಿದೆ.

ಆಧಾರ್ ಕಾರ್ಡ್ ಗೆ ಲಿಂಕ್ ಮಾಡದೇ ಇರುವ ಪ್ಯಾನ್ ಕಾರ್ಡ್ ಗಳನ್ನೆಲ್ಲ ನಕಲಿ ಎಂದು ಪರಿಗಣಿಸಲಾಗುತ್ತದೆ. ಬೇನಾಮಿ ವಹಿವಾಟಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ. ಹಾಗಾಗಿ ಈವರೆಗೂ ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದೇ ಇದ್ದವರು, ಬೇಗ ಸರ್ಕಾರದ ಸೂಚನೆಯನ್ನು ಪಾಲಿಸುವುದು ಉತ್ತಮ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...