alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ‘ಶುಭ ಸುದ್ದಿ’

ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಶುಭ ಸುದ್ದಿ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಲಾದ ಯೋಜನೆಗಳಿಂದ ಸುಮಾರು 50 ಲಕ್ಷ ಉದ್ಯೋಗ ಸೃಷ್ಠಿಯಾಗಲಿವೆ.

ಮೂಲಸೌಕರ್ಯ, ಸಾಮಾಜಿಕ ಯೋಜನೆಗಳ ಜಾರಿಗೊಳಿಸಲು ಬೇಕಾಗಿರುವ ನೌಕರರು ಮತ್ತು ಮಾನವ ದಿನಗಳ ಲೆಕ್ಕಾಚಾರವನ್ನು ಪರಿಗಣಿಸಿದಾಗ ಸುಮಾರು 50 ಲಕ್ಷ ಉದ್ಯೋಗ ಸೃಷ್ಠಿಯಾಗಲಿವೆ.

ಹೆದ್ದಾರಿ ನಿರ್ಮಾಣ, ಗ್ರಾಮೀಣ ರಸ್ತೆ, ಶೌಚಾಲಯ ನಿರ್ಮಾಣ, ಗ್ರಾಮೀಣ ವಸತಿ, ಮೆಗಾ ಫುಡ್ ಪಾರ್ಕ್, ನರೇಗಾ ವಿಭಾಗಗಳಲ್ಲಿ ಹೆಚ್ಚು ಉದ್ಯೋಗಾವಕಾಶಗಳಿವೆ. ಪ್ರತಿ ವರ್ಷ 1 ಕೋಟಿ ಮಂದಿ ಉದ್ಯೋಗಾಕಾಂಕ್ಷಿಗಳು ಔದ್ಯೋಗಿಕ ಮಾರುಕಟ್ಟೆಯನ್ನು ಪ್ರವೇಶಿಸಲಿದ್ದು, ಅವರಲ್ಲಿ ಅರ್ಧದಷ್ಟು ಮಂದಿಗೆ ಬಜೆಟ್ ನಲ್ಲಿ ಘೋಷಿಸಲಾದ ಯೋಜನೆಗಳಲ್ಲಿ ಉದ್ಯೋಗಾವಕಾಶ ಸಿಗಲಿದೆ.

ಯೋಜನೆಗಳ ಜಾರಿಗೆ ಬೇಕಾಗುವ ನೌಕರರು ಮತ್ತು ಮಾನವ ದಿನಗಳ ಸಂಖ್ಯೆಯನ್ನು ಇದೇ ಮೊದಲ ಬಾರಿಗೆ ಕೇಂದ್ರದ ಬಜೆಟ್ ನಲ್ಲಿ ತಿಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...