alex Certify
ಕನ್ನಡ ದುನಿಯಾ       Mobile App
       

Kannada Duniya

ಅಡಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಏನದು ಗೊತ್ತಾ..?

ಬೆಂಗಳೂರು: ಪ್ರತಿ ವರ್ಷ ಅಡಿಕೆ ಮಾರುಕಟ್ಟೆಗೆ ಬಂದು ಒಳ್ಳೆಯ ಧಾರಣೆ ಸಿಗುವ ಸಂದರ್ಭದಲ್ಲಿ ನಿಷೇಧದ ಮಾತುಗಳು ಕೇಳಿ ಬಂದು ದಿಢೀರ್ ಧಾರಣೆ ಕುಸಿತವಾಗುತ್ತದೆ.

ಕೇಂದ್ರ ಸರ್ಕಾರದ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ, ಆರೋಗ್ಯ ಖಾತೆ ಸಚಿವರು ಸಂಸತ್ ನಲ್ಲಿ, ಅಡಕೆ ಕ್ಯಾನ್ಸರ್ ಕಾರಕ ಎಂದು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಅಡಕೆ ಕ್ಯಾನ್ಸರ್ ಕಾರಕವಲ್ಲ ಎಂಬುದನ್ನು ದೃಢಪಡಿಸುವ ಸಂಶೋಧನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಿಧಾನ ಪರಿಷತ್ ನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕ ಐವನ್ ಡಿಸೋಜಾ, ರಾಜ್ಯದಲ್ಲಿ ಅಡಕೆ ಪ್ರಮುಖವಾದ ವಾಣಿಜ್ಯ ಬೆಳೆಯಾಗಿದೆ. ದೇಶದ ಒಟ್ಟು ಉತ್ಪಾದನೆಯಲ್ಲಿ ರಾಜ್ಯದ ಪಾಲು ಅಧಿಕವಾಗಿದ್ದು, ಅಧಿಕಾರಿಗಳು ನೀಡಿದ ತಪ್ಪು ಮಾಹಿತಿಯಿಂದಾಗಿ ಅಡಕೆ ನಿಷೇಧಿಸುವ ಬಗ್ಗೆ ಸೂಚನೆ ನೀಡಿರುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ. ಇದರಿಂದ ಬೆಳೆಗಾರರಲ್ಲಿ ಆತಂಕ ಎದುರಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಡಕೆ ಕ್ಯಾನ್ಸರ್ ಕಾರಕ ಅಲ್ಲ ಎನ್ನುವ ಸಂಶೋಧನಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುತ್ತದೆ. ಅಡಕೆ ಬೆಳೆಗಾರರ ಮಂಡಳಿಯನ್ನು ಸ್ಥಾಪಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...