alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ ಪಿ ಜಿ ಸಿಲಿಂಡರ್ ಕುರಿತು ಸಿಹಿ ಸುದ್ದಿ ನೀಡಿದ ಸರ್ಕಾರ

ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಎಲ್ಲದರ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ದಿನನಿತ್ಯದ ಜೀವನವೇ ದುಸ್ತರವಾಗುತ್ತಿದೆ ಎಂದು ಪರಿತಪಿಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.

ಮಂಗಳವಾರದಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಎಲ್ ಪಿ ಜಿ ಸಿಲಿಂಡರ್ ದರದಲ್ಲಿ 100 ರೂ. ನಷ್ಟು ಕಡಿಮೆಯಾಗಿದೆ ಎಂದು ತಿಳಿಸಿದೆ.

2017 ರ ಡಿಸೆಂಬರ್ ನಲ್ಲಿ ದೆಹಲಿಯಲ್ಲಿ ಎಲ್ ಪಿ ಜಿ (ಸಬ್ಸಿಡಿ ರಹಿತ) ಸಿಲಿಂಡರ್ ಬೆಲೆ 747 ರೂ. ಇದ್ದು, 2018 ರ ಮೇ ವೇಳೆ ಈ ದರ 650.50 ರೂ. ಆಗಿದೆ ಎಂದು ತಿಳಿಸಿದೆ. ಈ ಅವಧಿಯಲ್ಲಿ 96.50 ರೂ. ಇಳಿಕೆಯಾಗಿದೆ.

ಎಲ್ ಪಿ ಜಿ ದರ ಏರಿಕೆಯಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾದ ಹಿನ್ನಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದ್ದು, ಸಬ್ಸಿಡಿ ಸಹಿತ ಸಿಲಿಂಡರ್ ಗಳ ದರವೂ ಇಳಿಕೆಯಾಗಿದ್ದು, 2017 ರ ಡಿಸೆಂಬರ್ ನಲ್ಲಿ ಈ ದರ 495.69 ರೂ. ಇದ್ದರೆ 2018 ರ ಮೇ ನಲ್ಲಿ ಇದು 491.21 ರೂ. ಗೆ ಲಭ್ಯವಾಗುತ್ತಿದೆ ಎಂದು ತಿಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...