alex Certify
ಕನ್ನಡ ದುನಿಯಾ       Mobile App
       

Kannada Duniya

ಜನವರಿಯಲ್ಲೇ ಬಜೆಟ್ ಮಂಡನೆಗೆ ಚಿಂತನೆ

budge

ನವದೆಹಲಿ: ಸಾಮಾನ್ಯವಾಗಿ ಪ್ರತಿವರ್ಷ ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದ ಬಜೆಟ್ ಅನ್ನು, ಜನವರಿ ತಿಂಗಳಲ್ಲೇ ಮಂಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇನ್ನು ಮುಂದೆ 1 ತಿಂಗಳ ಮೊದಲೇ ಬಜೆಟ್ ಮಂಡಿಸಲಾಗುವುದು ಎನ್ನಲಾಗಿದೆ.

ಬಜೆಟ್ ಅನ್ನು ಇಂತಹುದೇ ದಿನದಂದು ಮಂಡಿಸಬೇಕೆಂಬ ನಿಯಮವೇನೂ ಇಲ್ಲ. ಸಾಮಾನ್ಯವಾಗಿ ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡಿಸಲಾಗುತ್ತಿದೆ. ಮುಂದಿನ ಸಾಲಿನಿಂದ ಜನವರಿಯಲ್ಲೇ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಇಷ್ಟು ವರ್ಷಗಳ ಕಾಲ ಮಂಡಿಸಲಾಗುತ್ತಿದ್ದ ರೈಲ್ವೇ ಬಜೆಟ್ ಅನ್ನು ಕೈ ಬಿಡಲು ಈಗಾಗಲೇ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಪ್ರತ್ಯೇಕ ರೈಲ್ವೇ ಬಜೆಟ್ ಇರುವುದಿಲ್ಲ.

ಅದೇ ರೀತಿ ಫೆಬ್ರವರಿ ಬದಲಿಗೆ ಜನವರಿಯಲ್ಲೇ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಫೆಬ್ರವರಿಯಲ್ಲಿ ಮಂಡಿಸುವ ಸಂಪ್ರದಾಯಕ್ಕೆ ಅಂತ್ಯ ಹಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...