alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡೀಸೆಲ್: ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಏರಿಕೆ ಕಾಣ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣಕ್ಕೆ ಮುಂದಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಸದ್ಯಕ್ಕೆ ಬೆಲೆ ಏರಿಕೆ ಮಾಡಬಾರದೆಂದು ಸೂಚಿಸಿದೆ ಎನ್ನಲಾಗಿತ್ತಾದರೂ, ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಸ್ಪಷ್ಟನೆ ನೀಡಿದ್ದು, ಬೆಲೆ ಹೆಚ್ಚಳ ಕೈ ಬಿಡಲು ಕೇಂದ್ರ ಸೂಚಿಸಿಲ್ಲ ಎಂದು ಹೇಳಿವೆ. ಏರಿಕೆಯಾಗ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ ನಿಯಂತ್ರಿಸಬೇಕು. ಅಬಕಾರಿ ಸುಂಕ ಕಡಿತಗೊಳಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಕೇಳಿ ಬಂದಿದೆ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಗಳಿಗೆ ಸದ್ಯಕ್ಕೆ ಆಗುವ ನಷ್ಟವನ್ನು ಭರಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿತ್ತು.

ಗುಜರಾತ್ ಚುನಾವಣೆ ವೇಳೆಯಲ್ಲಿ ತೈಲ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲಾಗಿತ್ತು. ಕರ್ನಾಟದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸದಂತೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಹೇಳಲಾಗಿತ್ತು.

ಆದರೆ, ಕೇಂದ್ರ ಸರ್ಕಾರ ಅಂತಹ ಯಾವುದೇ ಸೂಚನೆ ನೀಡಿಲ್ಲ. ಬೆಲೆ ಏರಿಕೆಯ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಬಾರದು ಎಂದು ಕೇಂದ್ರ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಹಿಂದೂಸ್ತಾನ್ ಪೆಟ್ರೊಲಿಯಂ ಕಾರ್ಪೊರೇಷನ್ ಲಿ. ಅಧ್ಯಕ್ಷ ಎಂ.ಕೆ. ಸುರಾನಾ ತಿಳಿಸಿದ್ದಾರೆ.

ಪೆಟ್ರೋಲ್ ಬೆಲೆ ಲೀಟರ್ ಗೆ 75 ರೂ. ದಾಟಿದ್ದು, ಡೀಸೆಲ್ ಬೆಲೆ ಲೀಟರ್ ಗೆ 66 ರೂ. ದಾಟಿದೆ. ಡೀಸೆಲ್ ಬೆಲೆ ಏರಿಕೆ ದಾಖಲೆ ಬರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...