alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗೆ ಆಗಮಿಸಿದ ಗೌರಿ ಹತ್ಯೆ ಆರೋಪಿಯ ಕುಟುಂಬಸ್ಥರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯ ವಿಚಾರಣೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಪ್ರಕರಣವನ್ನು ಮರುಸೃಷ್ಟಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಕೆಲವೊಂದು ವಿವರಗಳನ್ನು ಪಡೆಯಲು ಪರಶುರಾಮ್ ವಾಗ್ಮೋರೆಯ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆತನ ತಂದೆ ಅಶೋಕ್ ವಾಗ್ಮೋರೆ ಹಾಗೂ ಮಾವ ಅಶೋಕ್ ಕಾಂಬಳೆ ಆಗಮಿಸಿದ್ದಾರೆ.

ವಿಜಯಪುರ ಜಿಲ್ಲಾ ಶ್ರೀರಾಮಸೇನೆ ಮುಖ್ಯಸ್ಥರಾಗಿರುವ ರಾಕೇಶ್ ಮಠ ಅವರನ್ನೂ ಬರಲು ತಿಳಿಸಿದ್ದ ಮೇರೆಗೆ ಬೆಂಗಳೂರಿಗೆ ಆಗಮಿಸಿರುವ ರಾಕೇಶ್ ಮಠ, ವಿಶೇಷ ತನಿಖಾ ದಳದ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...