alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕ ಸಾರಿಗೆಗೆ GPS ಅಳವಡಿಕೆ ಕಡ್ಡಾಯ

ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡುವ ಉದ್ದೇಶದಿಂದ ಇನ್ನು ಮುಂದೆ ಸಾರ್ವಜನಿಕ ವಾಹನಗಳಲ್ಲಿ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸುವುದು ಕಡ್ಡಾಯವಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಏಪ್ರಿಲ್ 1 ರಿಂದ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಎಂದು ತಿಳಿಸಿದೆ.

ಮೂರು ಚಕ್ರ ವಾಹನ ಹಾಗೂ ಇ ರಿಕ್ಷಾಗಳನ್ನು ಈ ನಿಯಮದಿಂದ ಹೊರಗಿಡಲಾಗಿದ್ದು, ಇವುಗಳು ತೆರೆದ ವಾಹನಗಳಾಗಿರುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಲಾಗಿದೆ. ಬಸ್, ಟ್ಯಾಕ್ಸಿ ಸೇರಿದಂತೆ ಎಲ್ಲ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯವಾಗಿದ್ದು, ಇದನ್ನು ಉತ್ಪಾದಕ, ಡೀಲರ್ ಅಥವಾ ಅಪರೇಟರ್ ಗಳು ಅಳವಡಿಸಿಕೊಳ್ಳಬೇಕಾಗುತ್ತದೆ.

ಅಪಾಯ ಬಂದೊದಗಿದ ಸಂದರ್ಭದಲ್ಲಿ ಇಂತಹ ವಾಹನ ಎಲ್ಲಿದೆ ಎಂಬುದನ್ನು ಜಿಪಿಎಸ್ ಮುಖಾಂತರ ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಅಲ್ಲದೆ ಪ್ರಯಾಣಿಕ ಅಪಾಯಕ್ಕೆ ಸಿಲುಕಿದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಸಾರಿಗೆ ನಿಗಮ ಹಾಗೂ ಪೊಲೀಸ್ ಠಾಣೆಗೆ ತಕ್ಷಣ ಮಾಹಿತಿ ರವಾನೆಯಾಗುವ ವ್ಯವಸ್ಥೆ ಇರಲಿದೆ ಎನ್ನಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಕೈಗೊಂಡಿರುವ ಕ್ರಮವನ್ನು ಹಲವರು ಸ್ವಾಗತಿಸಿದ್ದು, ಅಳವಡಿಕೆಯಾದ ನಂತರ ನಿಗಾ ವಹಿಸುವ ಅಗತ್ಯವೂ ಇದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...