alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕ್

ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತಂದರೆ ದರ ಗಣನೀಯವಾಗಿ ಇಳಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ ಸುದ್ದಿ ಇಲ್ಲಿದೆ.

ಈ ಕುರಿತು ಮಾಹಿತಿ ನೀಡಿರುವ ಜಿ.ಎಸ್.ಟಿ.ಎನ್. ಸಚಿವರ ತಂಡದ ಮುಖ್ಯಸ್ಥ ಹಾಗೂ ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತಂದರೂ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗುವುದು ಕಷ್ಟ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಜಿ.ಎಸ್.ಟಿ.ಎನ್. 10ನೇ ಪರಿಶೀಲನಾ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ತೈಲ ಬೆಲೆಯ ಮೇಲೆ ಶೇಕಡಾ 40ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಇದನ್ನು ಜಿ.ಎಸ್.ಟಿ. ಅಡಿ ತಂದು ಶೇಕಡ 28 ರಷ್ಟು ತೆರಿಗೆ ನಿಗದಿಪಡಿಸಿದರೂ, ರಾಜ್ಯ ಸರ್ಕಾರಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಅಧಿಕಾರವಿರುವ ಕಾರಣ ಬೆಲೆ ಇಳಿಕೆಯಾಗುವುದು ಕಷ್ಟ. ಅಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಳಿಕೆ ಹಿನ್ನೆಲೆಯಲ್ಲಿ ಭಾರತದಲ್ಲೂ ಇದು ವ್ಯತ್ಯಾಸವಾಗುತ್ತದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...