alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಇಲ್ಲಿದೆ ಶುಭ ಸುದ್ದಿ

ಪುಣೆ: ಸಾರ್ವಜನಿಕ ಸ್ವಾಮ್ಯದ ತೈಲ ಕಂಪನಿ  ಇಂಡಿಯನ್ ಆಯಿಲ್ ಕಾರ್ಪೊರೇಷನ್(IOC) ವಾಹನ ಸವಾರರಿಗೆ ವಿಶೇಷ ಸೌಲಭ್ಯ ಕಲ್ಪಿಸಿದೆ.

ಗ್ರಾಹಕರ ಮನೆ ಬಾಗಿಲಿಗೆ ಡೀಸೆಲ್ ತಲುಪಿಸುವ ವ್ಯಸವ್ಥೆಯನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮಾಡಿದೆ. ಪುಣೆಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಡೀಸೆಲ್ ತಲುಪಿಸುವ ಸೇವೆಯನ್ನು ಈಗಾಗಲೇ ಆರಂಭಿಸಲಾಗಿದೆ.

ಇಂಧನ ಸಚಿವರಾದ ಪಿಯೂಷ್ ಗೋಯೆಲ್ ಅವರು, 2017 ರ ಏಪ್ರಿಲ್ ನಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಪೆಟ್ರೋಲ್, ಡೀಸೆಲ್ ಪೂರೈಕೆ ಮಾಡುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದರು. ಪೆಟ್ರೋಲ್ ಬಂಕ್ ಗಳಲ್ಲಿ ವಾಹನ ದಟ್ಟಣೆ ತಪ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಈಗ ಆರಂಭಿಕ ಹಂತದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪುಣೆಯಲ್ಲಿ ಮನೆ ಬಾಗಿಲಿಗೆ ಡೀಸೆಲ್ ಪೂರೈಕೆ ಸೇವೆಯನ್ನು ಆರಂಭಿಸಿದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಐ.ಒ.ಸಿ. ಹೇಳಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...