alex Certify
ಕನ್ನಡ ದುನಿಯಾ       Mobile App
       

Kannada Duniya

ಟೋಲ್ ಪ್ಲಾಜಾ ಬಳಿಯೇ ನಡೆಯಿತು ದುರಂತ

jammu-tioll-bridgeಜಮ್ಮು ಕಾಶ್ಮೀರದ ನಗ್ರೋಟಾ ಬಳಿ ದುರಂತವೊಂದು ನಡೆದಿದೆ. ಟೋಲ್ ಪ್ಲಾಜಾದಲ್ಲಿ ನಿಂತಿದ್ದ ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವ ಸಾವಿಗೀಡಾಗಿ ಇಬ್ಬರು ಗಾಯಗೊಂಡಿದ್ದಾರೆ.

ನಗ್ರೋಟಾದ ಟೋಲ್ ಪ್ಲಾಜಾದಲ್ಲಿ ಶುಲ್ಕ ಪಾವತಿಸಲು ಎರಡು ಕಾರುಗಳು ನಿಂತಿದ್ದವು. ಈ ಸಂದರ್ಭದಲ್ಲಿ ಟೋಲ್ ಅಧಿಕಾರಿ ಎರಡು ಕಾರುಗಳ ಮಧ್ಯದಿಂದ ಹಾದು ಹೋಗುತ್ತಿದ್ದು, ಆಗ ವೇಗವಾಗಿ ಬಂದ ಟ್ರಕ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಕಾರುಗಳನ್ನು ಟ್ರಕ್ ಸ್ವಲ್ಪ ದೂರ ಎಳೆದುಕೊಂಡು ಹೋಗಿದ್ದು, ಇವುಗಳ ನಡುವೆ ಸಿಲುಕಿಕೊಂಡಿದ್ದ ಟೋಲ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...