alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯೋಗಾಕಾಂಕ್ಷಿಗಳಿಗೊಂದು ಗುಡ್ ನ್ಯೂಸ್: 7275 ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ

ಐಬಿಪಿಎಸ್ 7275 ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್ 18ರಿಂದ ಅರ್ಜಿ ತುಂಬುವ ಪ್ರಕ್ರಿಯೆ ಶುರುವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10,2018 ರವರೆಗೆ ಅರ್ಜಿ ಭರ್ತಿ ಮಾಡಬಹುದಾಗಿದೆ.

ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ವೆಬ್ಸೈಟ್ www.ibps.inನಲ್ಲಿ ಅರ್ಜಿ ಭರ್ತಿ ಮಾಡಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಕ್ಲರ್ಕ್ ಹುದ್ದೆಗೆ ಅರ್ಜಿ ತುಂಬಬಹುದಾಗಿದೆ. ಪ್ರಿಲಿಮ್ಸ್ ಪರೀಕ್ಷೆ ಪಾಸ್ ಆದ ಅಭ್ಯರ್ಥಿಗಳು ಮಾತ್ರ ಮುಖ್ಯ ಪರೀಕ್ಷೆ ಬರೆಯಬಹುದಾಗಿದೆ. ಎರಡು ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಉದ್ಯೋಗ ಪಡೆಯಲಿದ್ದಾರೆ. ಯಾವುದೇ ಸಂದರ್ಶನವಿರುವುದಿಲ್ಲ.

ಪ್ರಿಲಿಮ್ಸ್ ಪರೀಕ್ಷೆ ಡಿಸೆಂಬರ್ 8,9,15 ಮತ್ತು 16 ರಂದು ನಡೆಯಲಿದೆ. ಮುಖ್ಯ ಪರೀಕ್ಷೆ 2019ರಲ್ಲಿ ನಡೆಯಲಿದೆ. ಪ್ರಿಲಿಮ್ಸ್ ಪರೀಕ್ಷೆಯಲ್ಲಿ 100 ಪ್ರಶ್ನೆಗಳಿರಲಿದೆ. ಒಂದು ಗಂಟೆ ಅವಕಾಶ ನೀಡಲಾಗುವುದು. ಮುಖ್ಯ ಪರೀಕ್ಷೆಯಲ್ಲಿ 190 ಪ್ರಶ್ನೆಗಳಿದ್ದು, 2 ಗಂಟೆ 40 ನಿಮಿಷ ಅವಕಾಶವಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 7200 ರಿಂದ 19300 ರೂಪಾಯಿ ತಿಂಗಳ ವೇತನ ಸಿಗಲಿದೆ. 21 ವರ್ಷ ಮೇಲ್ಪಟ್ಟ ಹಾಗೂ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...