alex Certify
ಕನ್ನಡ ದುನಿಯಾ       Mobile App
       

Kannada Duniya

ಆದಾಯ ತೆರಿಗೆ ಸಂಗ್ರಹಣೆಯಲ್ಲಿ ನಿರ್ಮಾಣವಾಗಿದೆ ದಾಖಲೆ

ಪ್ರಸಕ್ತ ವರ್ಷದಲ್ಲಿ ದೇಶದ ಆದಾಯ ತೆರಿಗೆ ಸಂಗ್ರಹಣೆಯಲ್ಲಿ ಭಾರೀ ದಾಖಲೆ ನಿರ್ಮಾಣವಾಗಿದೆ ಅಂತ ಆದಾಯ ತೆರಿಗೆ ಇಲಾಖೆ ಹೇಳುತ್ತಿದೆ. ಗುವಾಹಟಿಯಲ್ಲಿ ನಡೆದ ಪೂರ್ವ ವಲಯದ ಆದಾಯ ತೆರಿಗೆ ಅಧಿಕಾರಿಗಳ ಸಭೆಯಲ್ಲಿ ಈ ವಿಚಾರ ತಿಳಿದುಬಂದಿದೆ.

ಈ ಬಾರಿ 6.92 ಲಕ್ಷ ಕೋಟಿ ಆದಾಯ ತೆರಿಗೆ ಹೆಚ್ಚುವರಿಯಾಗಿ ಸಂಗ್ರಹಣೆಯಾಗಿದೆಯಂತೆ. ಕಳೆದ ಬಾರಿ 1.31 ಕೋಟಿ ಆದಾಯ ತೆರಿಗೆದಾರರಲ್ಲಿ 5.61 ಕೊಟಿ ಹೊಸ ತೆರಿಗೆದಾರರು ಸೇರ್ಪಡೆಯಾಗಿದ್ದರಂತೆ. ಆದಾಯ ತೆರಿಗೆ ಮಾಹಿತಿ ಸಲ್ಲಿಸುವವರ ಸಂಖ್ಯೆ ಸದ್ಯಕ್ಕೆ 1.06 ಕೋಟಿಯಷ್ಟಿದೆ. ಈ ಬಾರಿ 1.25 ಕೋಟಿಗೆ ಹೆಚ್ಚಾಗುವ ಸಾಧ್ಯತೆ ಇದೆಯಂತೆ.

ಕಳೆದ ವರ್ಷ ಇದೇ ಸಮಯಕ್ಕೆ 16.7 %ನಷ್ಟು ತೆರಿಗೆದಾರರ ಸಂಖ್ಯೆ ಹೆಚ್ಚಾದ ಪರಿಣಾಮ 6082 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿತ್ತು. 2018-19ರಲ್ಲಿ 8357 ರೂಪಾಯಿ ಹೆಚ್ಚುವರಿ ತೆರಿಗೆ ಸಂಗ್ರಹವಾಗಿದ್ದು, 17.75 ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...