alex Certify
ಕನ್ನಡ ದುನಿಯಾ       Mobile App
       

Kannada Duniya

ತೆರಿಗೆ ಪಾವತಿದಾರರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಆದಾಯ ತೆರಿಗೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಮೊದಲು ನೀಡಿದ್ದ ಜುಲೈ 31ರ ಗಡುವನ್ನು, ಆಗಸ್ಟ್ 31 ರ ವರೆಗೆ ವಿಸ್ತರಿಸಿದೆ.

ಅವಧಿ ಮೀರಿ ಆದಾಯ ತೆರಿಗೆ ಪಾವತಿಸಿದ್ರೆ, ದಂಡ ವಿಧಿಸೋದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಜುಲೈ 31 ರ ಅವಧಿ ಸಾಕಾಗದು ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ, ಕೇಂದ್ರ ಹಣಕಾಸು ಸಚಿವಾಲಯ ಈ ಬಗ್ಗೆ ಗುರುವಾರ ಆದೇಶ ಹೊರಡಿಸಿದೆ. ಐಟಿಆರ್ ಸಲ್ಲಿಕೆಗೆ ಈ ಹಿಂದೆ ಜುಲೈ 31, 2018 ಎಂದು ದಿನವನ್ನು ಗೊತ್ತು ಪಡಿಸಿತ್ತು. ಆದರೆ ಒಂದು ತಿಂಗಳ ಕಾಲ ಐಟಿ ರಿಟರ್ನ್ಸ್ ಗೆ ಅವಕಾಶ ಕಲ್ಪಿಸಲಾಗಿದೆ.

ತೆರಿಗೆ ಪಾವತಿಸುವವರಿಗೆ ಸರ್ಕಾರ ಹೊರಡಿಸಿರುವ ಆದೇಶ ಅನುಕೂಲವಾಗಿದ್ದು, ನಿಗದಿತ ದಿನಾಂಕದ ನಂತರ ಐಟಿಆರ್ ಪಾವತಿಸಿದರೆ ರೂ. 5,000 ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ ಈಗ ನೀಡಿರುವ ಗಡುವು ತೆರಿಗೆದಾರರಲ್ಲಿ ನೆಮ್ಮದಿ ತಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...