alex Certify
ಕನ್ನಡ ದುನಿಯಾ       Mobile App
       

Kannada Duniya

‘2022 ರ ವೇಳೆ ಭಾರತದ ಆರ್ಥಿಕತೆ ಗಾತ್ರ ಏರಿಕೆ’

ಐಟಿ ಮತ್ತು ರಿಟೇಲ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗ ಉತ್ಪಾದನೆಯೊಂದಿಗೆ ಭಾರತದ ಆರ್ಥಿಕತೆ ಶೇ.8 ರಷ್ಟು ಹೆಚ್ಚಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

2022ರಲ್ಲಿ ಭಾರತದ ಆರ್ಥಿಕತೆ ಗಾತ್ರ 5 ಟ್ರಿಲಿಯನ್ ಗೆ ಏರಿಕೆಯಾಗುವ ಮೂಲಕ ದ್ವಿಗುಣವಾಗಲಿದೆ.‌ ಉತ್ಪಾದಕ ಹಾಗೂ ಕೃಷಿ ಕ್ಷೇತ್ರದ ಕೊಡುಗೆ 1 ಟ್ರಿಲಿಯನ್ ಡಾಲರ್ ಆಗಬಹುದೆಂಬ ವಿಶ್ವಾಸವಿದೆ ಎಂದು ಅವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.

ಈ ವಾರ ದೇಶದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ವಿಲೀನ ಘೋಷಿಸಿದ್ದು, ದೇಶದ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದ್ದು, ರಾಷ್ಟ್ರೀಯ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೇಕ್ ಇನ್ ಇಂಡಿಯಾಗೆ ಒತ್ತು ನೀಡಿದ್ದರಿಂದ ಭಾರತದಲ್ಲಿ ಬಳಕೆಯಾಗುತ್ತಿರುವ ಶೇ.80 ಮೊಬೈಲ್ ಉತ್ಪಾದನೆಯಾಗುತ್ತಿದ್ದು, ಇದರಿಂದ 3 ಲಕ್ಷ ಕೋಟಿ ವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ವಿವರಿಸಿದ ಅವರು, ದೇಶದ ಹಿತದೃಷ್ಟಿಯಿಂದ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಸಿದ್ಧವಿದೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...