alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ರೈಲ್ವೇ ಇಲಾಖೆ

ನವದೆಹಲಿ: ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಭಾಗವಾಗಿ ರೈಲ್ವೇ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಹೆಚ್ಚಿಸಲು ರೈಲ್ವೇ ಇಲಾಖೆ ಕ್ರಮ ಕೈಗೊಂಡಿದೆ.

ಈಗಾಗಲೇ ದೇಶದ ಪ್ರಮುಖ 216 ರೈಲು ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯವನ್ನು ಸುಮಾರು 7 ಮಿಲಿಯನ್ ಪ್ರಯಾಣಿಕರು ಪಡೆದುಕೊಳ್ಳುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಪ್ರದೇಶಗಳು ಸೇರಿದಂತೆ ಬಹುತೇಕ ಎಲ್ಲಾ ನಿಲ್ದಾಣಗಳಲ್ಲಿ(ದೇಶಾದ್ಯಂತ 8500) ವೈಫೈ ಸೌಲಭ್ಯ ಕಲ್ಪಿಸಲಾಗ್ತಿದೆ. ಇದರಿಂದಾಗಿ ಪ್ರಯಾಣಿಕರಿಗೆ ಉಚಿತವಾಗಿ ಇಂಟರ್ ನೆಟ್ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ.

ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಂತರ್ಜಾಲ ಸಂಪರ್ಕವು ದಿನನಿತ್ಯದ ಕೆಲಸದಲ್ಲಿ ಪ್ರಮುಖ ಅವಶ್ಯಕತೆಯಾಗಿದೆ. ಪ್ರಾಥಮಿಕ ಹಂತದಲ್ಲಿ 1200 ಕೇಂದ್ರಗಳಲ್ಲಿ ವೈಫೈ ಸೌಲಭ್ಯವನ್ನು ಕಲ್ಪಿಸಲಾಗ್ತಿದೆ. ದೇಶದ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ರೈಲ್ವೇ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...