alex Certify
ಕನ್ನಡ ದುನಿಯಾ       Mobile App
       

Kannada Duniya

GST ಬಳಿಕ ಮೊದಲ ಬಜೆಟ್, ಫೆಬ್ರವರಿ 1 ರಂದು ಮಂಡನೆ…?

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ನಂತರದಲ್ಲಿ ಮೊದಲ ಬಜೆಟ್ ಮಂಡಿಸಲು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಜನವರಿ 30 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 1 ರಂದು ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆಯನ್ನು ಸಂಸತ್ ಎದುರು ಇಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಫೆಬ್ರವರಿ ಕೊನೆಯ ವಾರದಲ್ಲಿ ಬಜೆಟ್ ಮಂಡಿಸಲಾಗುತ್ತಿತ್ತು. 2017 ರಲ್ಲಿ ಬ್ರಿಟಿಷ್ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದ ಕೇಂದ್ರ ಸರ್ಕಾರ, ಪ್ರತ್ಯೇಕವಾಗಿದ್ದ ರೈಲ್ವೇ ಬಜೆಟ್ ಅನ್ನು ಸಾಮಾನ್ಯ ಬಜೆಟ್ ನಲ್ಲಿಯೇ ವಿಲೀನಗೊಳಿಸಿತ್ತು. ಫೆಬ್ರವರಿ ಮೊದಲ ವಾರದಲ್ಲಿಯೇ ಬಜೆಟ್ ಮಂಡಿಸಲಾಗಿತ್ತು.

2018 -19 ಸಾಲಿನ ಬಜೆಟ್ ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಸರ್ಕಾರದ ಕೊನೆಯ ಬಜೆಟ್ ಆಗಲಿದೆ. 2019 ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಲೇಖಾನುದಾನವನ್ನು ಮಾತ್ರ ಮಂಡಿಸಬಹುದಾಗಿದೆ.

ಅರುಣ್ ಜೇಟ್ಲಿ ಅವರಿಗೆ 5 ನೇ ಬಜೆಟ್ ಮತ್ತು ಎನ್.ಡಿ.ಎ. ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಇದಾಗಿರುವುದರಿಂದ ಸಾಕಷ್ಟು ಕುತೂಹಲ ಮೂಡಿದೆ. ನೇರ ತೆರಿಗೆ ಬದಲಾವಣೆ, ಹೊಸ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...