alex Certify
ಕನ್ನಡ ದುನಿಯಾ       Mobile App
       

Kannada Duniya

SBI ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ ರೈಲ್ವೇ ಇಲಾಖೆ

ಭಾರತೀಯ ರೈಲ್ವೇ ಇಲಾಖೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಐ ಆರ್ ಸಿ ಟಿ ಸಿ ನೀಡಲಿರುವ ಪ್ಲಾಟಿನಂ ಕ್ರೆಡಿಟ್ ಕಾರ್ಡ್ ಪಡೆಯುವವರು ಹಲವು ಕೊಡುಗೆಗಳನ್ನು ಪಡೆಯಲಿದ್ದಾರೆ. ಈ ಕ್ರೆಡಿಟ್ ಕಾರ್ಡ್ ಮೂಲಕ ಟಿಕೆಟ್ ಬುಕ್ ಮಾಡುವ ಗ್ರಾಹಕರಿಗೆ ಶೇ.10 ರಷ್ಟು ರಿವಾರ್ಡ್ ಪಾಯಿಂಟ್ಸ್ ಸಿಗಲಿದೆ.

ಇಷ್ಟೇ ಅಲ್ಲ ಜೊತೆಗೆ ಇನ್ನೂ ಹಲವು ಸೌಲಭ್ಯಗಳು ಈ ಗ್ರಾಹಕರಿಗೆ ಸಿಗಲಿದ್ದು, ಎಸಿ ಟಿಕೆಟ್ ಬುಕ್ ಮಾಡುವ ಗ್ರಾಹಕರಿಗೆ ಮಾತ್ರ ಈ ಸೌಲಭ್ಯಗಳು ಲಭ್ಯವಾಗಲಿದೆ. ಈ ಸೌಲಭ್ಯವನ್ನು ಪಡೆಯಲು ರೈಲ್ವೇ ಇಲಾಖೆಯ ಅಧಿಕೃತ ವೆಬ್ ಸೈಟ್ irctc.co.in ಗೆ ಲಾಗಿನ್ ಆಗುವ ಮೂಲಕ ಅಥವಾ ಆಪ್ ನಿಂದ ಪಡೆಯಬಹುದಾಗಿದೆ.

ಇಷ್ಟೇ ಅಲ್ಲ ಟಿಕೆಟ್ ಬುಕ್ ಮಾಡುವ ವೇಳೆ ಪಡೆಯುವ ಶೇ.1.8 ಟ್ರಾನ್ಸಕ್ಷನ್ ಚಾರ್ಜಸ್ ರಿಯಾಯಿತಿ ಸಿಗಲಿದೆ. ಜೊತೆಗೆ 10 ಲಕ್ಷ ರೂ. ವರೆಗೆ ಉಚಿತ ಅಪಘಾತ ವಿಮೆ ಸೌಲಭ್ಯ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...