alex Certify
ಕನ್ನಡ ದುನಿಯಾ       Mobile App
       

Kannada Duniya

ದೇವೇಗೌಡರ ನಿವಾಸಕ್ಕೆ ಎಚ್ಡಿಕೆ ಭೇಟಿ

ಮೈತ್ರಿಕೂಟದ ಸರ್ಕಾರದ ಪರವಾಗಿ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ವಿಧಾನಸೌಧಕ್ಕೆ ತೆರಳುವ ಮುನ್ನ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕುಮಾರಸ್ವಾಮಿಯವರು ಬೆಳಿಗ್ಗೆ ಜೆ.ಪಿ. ನಗರದ ತಮ್ಮ ನಿವಾಸದಿಂದ ನೇರವಾಗಿ ಪದ್ಮನಾಭನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿದ್ದು, ವಿಶ್ವಾಸಮತ ಯಾಚನೆ ಕುರಿತಂತೆ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.

ಕಳೆದ ರಾತ್ರಿ ಜೆಡಿಎಸ್ ಶಾಸಕರು ತಂಗಿರುವ ಗಾಲ್ಫ್ ಲಿಂಕ್ ರೆಸಾರ್ಟ್ ಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮೈತ್ರಿಕೂಟದ ಸರ್ಕಾರವಾಗಿರುವ ಕಾರಣ ಎಲ್ಲರಿಗೂ ಸಚಿವ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ. ಹಾಗಾಗಿ ಸಚಿವ ಸ್ಥಾನ ವಂಚಿತ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿಕೊಡುವ ಭರವಸೆಯನ್ನು ಕುಮಾರಸ್ವಾಮಿ ನೀಡಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...