alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಲಿಂಕ್ ಮಾಡಲು ಸಿಗುತ್ತಾ ಮತ್ತಷ್ಟು ಕಾಲಾವಕಾಶ?

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇದರೊಂದಿಗೆ ಕೆಲ ಖಾಸಗಿ ಸೇವೆಗಳಿಗೂ ಆಧಾರ್ ಲಿಂಕ್ ಮಾಡಬೇಕಾಗಿದ್ದು, ಇದಕ್ಕೆ ಮಾರ್ಚ್ 31 ಕಡೆ ದಿನವೆಂದು ಸರ್ಕಾರ ಈಗಾಗಲೇ ಪ್ರಕಟಿಸಿದೆ.

ಈ ಮಧ್ಯೆ ಮಾರ್ಚ್ 31 ಸಮೀಪಿಸುತ್ತಿದ್ದರೂ ಆಧಾರ್ ಲಿಂಕ್ ಮಾಡದವರಿಗೆ ಗುಡ್ ನ್ಯೂಸ್ ಇಲ್ಲಿದೆ. ಬಹಳಷ್ಟು ಮಂದಿ ಆಧಾರ್ ಕಾರ್ಡ್ ಸಹ ಮಾಡಿಸದಿರುವುದು ಕಂಡು ಬಂದಿದ್ದು, ಅಂತವರು ಆಧಾರ್ ಕಾರ್ಡ್ ಮಾಡಿಸಿದ ಬಳಿಕ ಯೋಜನೆಗಳಿಗೆ ಲಿಂಕ್ ಮಾಡಲು ಮತ್ತಷ್ಟು ಕಾಲಾವಕಾಶ ಸಿಗುವ ನಿರೀಕ್ಷೆಯಿದೆ.

ಈ ಕುರಿತು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮಂಗಳವಾರದಂದು ಆಧಾರ್ ಕುರಿತು ವಿಚಾರಣೆ ನಡೆಸುತ್ತಿರುವ ನ್ಯಾಯಪೀಠದ ಮುಂದೆ ಮಾಹಿತಿ ನೀಡಿದ್ದು, ಅಗತ್ಯ ಬಿದ್ದರೆ ಈ ಹಿಂದಿನಂತೆ ಮಾರ್ಚ್ 31 ರ ಗಡುವನ್ನು ವಿಸ್ತರಿಸಲು ಸರ್ಕಾರ ಸಿದ್ದವಿದೆ ಎಂದಿದ್ದಾರೆ.

ಆಧಾರ ಕಡ್ಡಾಯದ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಮನವಿದಾರರ ಪರ ವಕೀಲರು, ಆಧಾರ್ ಲಿಂಕ್ ಮಾಡಲು ಮಾರ್ಚ್ 31 ರ ಗಡುವು ಸಮೀಪಿಸುತ್ತಿದೆ. ಆದರೆ ಪ್ರಕರಣದ ವಿಚಾರಣೆ ಇನ್ನೂ ಮುಗಿದಿಲ್ಲ. ಹಾಗಾಗಿ ಈ ಗಡುವನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಪೂರಕವಾಗಿ ಅಟಾರ್ನಿ ಜನರಲ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...