alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯರಿಗೊಂದು ಗುಡ್ ನ್ಯೂಸ್: ವರಮಹಾಲಕ್ಷ್ಮಿ ಹಬ್ಬಕ್ಕೆ ಸಿಗಲಿದೆ ಈ ಕೊಡುಗೆ

ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಹಿಳೆಯರಿಗೊಂದು ವಿಶೇಷ ಕೊಡುಗೆ ನೀಡಲು ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ 10,000 ರೂ. ಮೌಲ್ಯದ ಮೈಸೂರು ರೇಷ್ಮೆ ಸೀರೆಯನ್ನು 4,500 ರೂ. ಗಳಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಪ್ರವಾಸೋದ್ಯಮ ಮತ್ತು ರೇಷ್ಮೆ ಖಾತೆ ಸಚಿವ ಸಾ ರಾ ಮಹೇಶ್ ಈ ವಿಚಾರವನ್ನು ತಿಳಿಸಿದ್ದು, ವಿಶ್ವ ವಿಖ್ಯಾತ ಮೈಸೂರು ರೇಷ್ಮೆ ಸೀರೆ ಜನಸಾಮಾನ್ಯರಿಗೂ ದೊರಕುವಂತೆ ಮಾಡಲು ಆರಂಭಿಕ ಬೆಲೆಗೆ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ದರ ದುಬಾರಿ ಆಗಿರುವ ಕಾರಣ ಮೈಸೂರು ರೇಷ್ಮೆ ಸೀರೆ ನಮಗೆ ಕೈಗೆಟಕುವುದಿಲ್ಲವೆಂಬ ಭಾವನೆ ಹಲವರಲ್ಲಿದೆ. ಈಗ ಕಡಿಮೆ ಬೆಲೆಗೆ ಮಾರಾಟ ಮಾಡಲು ತೀರ್ಮಾನಿಸಿರುವುದರಿಂದ ಖರೀದಿಸಲು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...