alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ದಿನದಲ್ಲಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಜನರ ಸಂಖ್ಯೆ ಎಷ್ಟು ಗೊತ್ತಾ…?

ಬೆಂಗಳೂರು: ನಮ್ಮ ಮೆಟ್ರೋದಲ್ಲಿ 6 ಬೋಗಿಗಳನ್ನು ಅಳವಡಿಸಿದ ಬೆನ್ನಲ್ಲೇ ದಾಖಲೆ ಪ್ರಮಾಣದಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 4.23 ಲಕ್ಷ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

ಜು.2 ರಂದು 3.95 ಲಕ್ಷ ಮಂದಿ ಪ್ರಯಾಣಿಸುವ ಮೂಲಕ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿತ್ತು. ಬಳಿಕ ಪ್ರತಿ ದಿನ ಸರಾಸರಿ 3.60 ಲಕ್ಷ ಜನರು ಮೆಟ್ರೊದಲ್ಲಿ ಪ್ರಯಾಣಿಸುತ್ತಿದ್ದಾರೆ. ಈಗ ಮೊದಲ ಬಾರಿಗೆ ಆ.10 ರಂದು 4.23 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಬೈಯ್ಯಪ್ಪನಹಳ್ಳಿ-ಮೈಸೂರು ರಸ್ತೆ ನೇರಳೆ ಮಾರ್ಗದಲ್ಲಿ 2.30 ಲಕ್ಷ ಹಾಗೂ ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ 1.92 ಲಕ್ಷ ಮಂದಿ ಪ್ರಯಾಣ ಮಾಡಿದ್ದಾರೆ. ಟಿಕೆಟ್‌ ಶುಲ್ಕದಿಂದ ನೇರಳೆ ಮಾರ್ಗದಲ್ಲಿ 50.85 ಲಕ್ಷ ರೂ. ಹಾಗೂ ಹಸಿರು ಮಾರ್ಗದಲ್ಲಿ 52.82 ಲಕ್ಷ ರೂ. ಆದಾಯ ಸಂಗ್ರಹವಾಗಿದೆ.

ಬಿಎಂಆರ್‌ಸಿಎಲ್‌ ಸ್ಮಾರ್ಟ್‌ ಕಾರ್ಡ್‌ ಖರೀದಿಗೆ ಒತ್ತು ನೀಡಿರುವುದರಿಂದ ಜುಲೈನಲ್ಲಿ 94,734 ಸ್ಮಾರ್ಟ್‌ ಕಾರ್ಡ್‌ಗಳು ಮಾರಾಟವಾಗಿವೆ. ಜೂನ್‌ನಲ್ಲಿ 1.1 ಕೋಟಿ ಮಂದಿ ಮೆಟ್ರೊದಲ್ಲಿ ಪ್ರಯಾಣಿಸಿದ್ದರು. ಜುಲೈನಲ್ಲಿ 1.15 ಕೋಟಿ ಪ್ರಯಾಣಿಕರು ಮೆಟ್ರೊ ಬಳಸಿದ್ದು, 31.4 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...