alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ. 5 ರಿಂದ ಬದಲಾಗಿದೆ ‘ಪಾನ್ ಕಾರ್ಡ್’ ನಿಯಮ

ಪಾನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆ ಡಿಸೆಂಬರ್ 5 ರಿಂದ ಕೆಲ ಬದಲಾವಣೆಗಳನ್ನು ಮಾಡಿದೆ. ಹೊಸ ನಿಯಮಗಳು ಈಗಾಗಲೇ ಜಾರಿಗೆ ಬಂದಿದ್ದು, ಇದರ ಕುರಿತು ಮಾಹಿತಿ ಇಲ್ಲಿದೆ.

ಹೊಸ ನಿಯಮದ ಪ್ರಕಾರ, ವಾರ್ಷಿಕವಾಗಿ 2.5 ಲಕ್ಷಕ್ಕಿಂತ ಹೆಚ್ಚು ವ್ಯವಹಾರ ನಡೆಸುವ ಹಣಕಾಸು ಸಂಸ್ಥೆಗಳಿಗೆ ಪಾನ್ ಕಾರ್ಡ್ ಅನಿವಾರ್ಯವಾಗಲಿದೆ. ವಾರ್ಷಿಕವಾಗಿ 2.5 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಸಂಸ್ಥೆಗಳು ಪಾನ್ ಕಾರ್ಡ್ ಪಡೆಯಬೇಕಿದೆ. 2019 ರ ಮೇ 31 ರೊಳಗೆ ಇದಕ್ಕಾಗಿ ಅರ್ಜಿ ಸಲ್ಲಿಸಬೇಕಿದೆ.

ಹಾಗೆಯೇ ಪಾನ್ ಕಾರ್ಡ್ ಪಡೆಯೋಕೆ ಇನ್ಮುಂದೆ ತಂದೆಯ ಹೆಸರು ಕಡ್ಡಾಯವಲ್ಲ. ಸಿಂಗಲ್ ಪೇರೆಂಟ್ ಅಥವಾ ತಾಯಿಯ ಬಳಿ ಬೆಳೆದವರು ಪಾನ್ ಕಾರ್ಡ್ ಪಡೆಯಬಹುದಾಗಿದೆ. ತೆರಿಗೆಯಿಂದ ತಪ್ಪಿಸಿಕೊಳ್ಳುತ್ತಿರುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿರುವ ಇಲಾಖೆ, ವಾರ್ಷಿಕವಾಗಿ ಐದು ಲಕ್ಷಕ್ಕಿಂತ ಕಡಿಮೆ ವ್ಯವಹಾರ ನಡೆಸುವ ಸಂಸ್ಥೆಗಳು ಪಾನ್ ನಂಬರ್ ಪಡೆಯಬೇಕೆಂದು ಹೊಸ ನಿಯಮದಲ್ಲಿ ಹೇಳಲಾಗಿದೆ.

ಅಲ್ಲದೆ ಪಾನ್ ಕಾರ್ಡ್ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗುತ್ತಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ ನಾಲ್ಕು ಗಂಟೆಯೊಳಗಾಗಿ ಪಾನ್ ಕಾರ್ಡ್ ಲಭಿಸುವಂತೆ ಮಾಡಲಾಗುತ್ತಿದೆ. ಇದು ಶೀಘ್ರದಲ್ಲೇ ಅನುಷ್ಟಾನಕ್ಕೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...