alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿಯಲ್ಲಿ ರಫ್ತು ಉತ್ತೇಜನ ಶಾಖಾ ಕಚೇರಿ

nirmal_mwn

ಬೆಳಗಾವಿ: ಲೋಕಸಭೆ ಸದಸ್ಯ ಸುರೇಶ್ ಅಂಗಡಿ, ಬೆಳಗಾವಿಯಲ್ಲಿ ವಿದೇಶಾಂಗ ವ್ಯವಹಾರ ನಿರ್ದೇಶನಾಲಯದ (ಡಿ.ಜಿ.ಎಫ್.ಟಿ) ಕಚೇರಿ ಆರಂಭಿಸಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕದಲ್ಲಿ ಆಮದು ಮತ್ತು ರಫ್ತು ಬೆಳವಣಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದೇಶಾಂಗ ವ್ಯವಹಾರ ನಿರ್ದೇಶನಾಲಯದ ಶಾಖಾ ಕಚೇರಿಯನ್ನು ಆರಂಭಿಸುವುದಾಗಿ ಸಚಿವೆ ತಿಳಿಸಿದ್ದಾರೆ. ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ರಫ್ತು ಶಾಖಾ ಕಚೇರಿ ಆರಂಭಿಸುವುದರಿಂದ ಈ ಭಾಗದ ಉದ್ದಿಮೆದಾರರು ಬೆಂಗಳೂರಿಗೆ ಹೋಗಿ ಬರುವುದು ತಪ್ಪಲಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಸುತ್ತ ಮುತ್ತಲಲ್ಲಿ ಹಣ್ಣು ತರಕಾರಿ ಹೆಚ್ಚಾಗಿ ಬೆಳೆಯುತ್ತಿದ್ದು, ಇವನ್ನು ವಿಮಾನದ ಮೂಲಕ ಹೊರ ದೇಶಗಳಿಗೆ ಕಳುಹಿಸಲು ಬೇಡಿಕೆ ಇದೆ. ಈ ಬಗ್ಗೆ ಸಂಬಂಧಿಸಿದ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...