alex Certify ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಕಳೆದ 15 ದಿನಗಳಿಂದ ಏರುಗತಿಯಲ್ಲಿ ಸಾಗಿ ಶತಕ ಬಾರಿಸಿದ್ದ ಈರುಳ್ಳಿ ದರ ಇಳಿಮುಖವಾಗಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ ದರ ಕಡಿಮೆಯಾಗತೊಡಗಿದೆ.

ಒಂದು ತಿಂಗಳ ಹಿಂದೆ ಟೊಮೆಟೊ ದರ ಗಗನಕ್ಕೇರಿ ಹೊಸ ದಾಖಲೆಯನ್ನೇ ಬರೆದಿತ್ತು. ಈಗ ಈರುಳ್ಳಿ ಕೂಡ ಅದೇ ಹಾದಿಯಲ್ಲಿ ಸಾಗಿತ್ತು. ಚಿಕ್ಕಮಗಳೂರಿನಲ್ಲಿ 100 ರೂಪಾಯಿ ಗಡಿ ದಾಟಿತ್ತು. ರಾಜ್ಯದ ವಿವಿಧೆಡೆ ಕೆಜಿ ಈರುಳ್ಳಿಗೆ 70, 80, 90 ರೂಪಾಯಿವರೆಗೂ ಮಾರಾಟವಾಗಿತ್ತು.

ಮಹಾರಾಷ್ಟ್ರ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿತವಾಗಿದ್ದು, ಅಲ್ಲಿಂದ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದರ ಇಳಿಕೆಯತ್ತ ಸಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...