alex Certify
ಕನ್ನಡ ದುನಿಯಾ       Mobile App
       

Kannada Duniya

ನಂಬಿ..! 1 ಕೆ.ಜಿ. ಈರುಳ್ಳಿಗೆ ಕೇವಲ 5 ಪೈಸೆ..!!

oni

ನಾಸಿಕ್: ರೈತರು ಬೆಳೆದ ಉತ್ಪನ್ನಗಳಿಗೆ, ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕೆಂಬ ಬೇಡಿಕೆ ಹಿಂದಿನಿಂದಲೂ ಇದ್ದರೂ, ಅದು ಈಡೇರಿಲ್ಲ. ಬೆಳೆ ಬಂದಾಗ ಬೆಲೆ ಇರಲ್ಲ. ಬೆಲೆ ಇದ್ದಾಗ ಬೆಳೆ ಬರಲ್ಲ ಎಂಬ ಮಾತು ಪ್ರಚಲಿತದಲ್ಲಿದೆ.

ಹೀಗೆ ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುವಂತಾಗಿದೆ. ಮಹಾರಾಷ್ಟ್ರದಲ್ಲಿ ಈರುಳ್ಳಿಯ ಸಗಟು ಧಾರಣೆ ಪಾತಾಳಕ್ಕೆ ಕುಸಿದಿದ್ದು, 1 ಕೆ.ಜಿ.ಗೆ ಕೇವಲ 5 ಪೈಸೆ ದರ ನಿಗದಿಯಾಗಿದೆ. ಇದರಿಂದ ಆಕ್ರೋಶಗೊಂಡ ರೈತರು, ಮಾಲನ್ನು ವಾಪಸ್ ತೆಗೆದುಕೊಂಡು ಹೋಗಿದ್ದಾರೆ. ಸತತ ಬರಗಾಲದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ರೈತರು, ಹೇಗೋ ಕಷ್ಟಪಟ್ಟು ಈರುಳ್ಳಿ ಬೆಳೆದಿದ್ದರು. ಫಸಲು ಕೂಡ ಉತ್ತಮವಾಗಿ ಬಂದಿತ್ತು. ಆದರೆ, ಮಾರುಕಟ್ಟೆಗೆ ತಂದ ಈರುಳ್ಳಿಗೆ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ.

2015 ರ ಆಗಸ್ಟ್ ನಲ್ಲಿ 1 ಕ್ವಿಂಟಾಲ್ ಈರುಳ್ಳಿಗೆ 5824 ರೂಪಾಯಿ ದರ ಇತ್ತು. ಬರದಿಂದ ಕಬ್ಬು ಬೆಳೆಯುವುದನ್ನು ಬಿಟ್ಟ ರೈತರು ಈರುಳ್ಳಿ ಬೆಳೆದಿದ್ದು, ಮಾರುಕಟ್ಟೆಗೆ ಭಾರೀ ಪ್ರಮಾಣದಲ್ಲಿ ಈರುಳ್ಳಿ ಬಂದ ಕಾರಣ, ಬೆಲೆ ಪಾತಾಳಕ್ಕೆ ಕುಸಿದಿದೆ. ರೈತರು ಬೆಳೆಯನ್ನು ವಾಪಸ್ ತೆಗೆದುಕೊಂಡು ಹೋಗಿದ್ದಾರೆ. ಮತ್ತೆ ಕೆಲವರು ಅಲ್ಲೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...